ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರದ್ಧಾ ವಾಲಕರ್‌ ಕೊಲೆ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ಆರೋಪಿ ಅಫ್ತಾಬ್‌

Last Updated 22 ಡಿಸೆಂಬರ್ 2022, 6:13 IST
ಅಕ್ಷರ ಗಾತ್ರ

ನವದೆಹಲಿ: ಶ್ರದ್ಧಾ ವಾಲಕರ್‌ ಕೊಲೆ ಪ್ರಕರಣದ ಆರೋಪಿ ಅಫ್ತಾಬ್‌ ಅಮೀನ್‌ ಪೂನವಾಲಾ ಜಾಮೀನು ಕೋರಿ ದೆಹಲಿಯ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದ. ಇದೀಗ ಪ್ರಕರಣಕ್ಕೆ ತಿರುವು ಸಿಕ್ಕಿದ್ದುಪೂನವಾಲಾ ತನ್ನ ಜಾಮೀನು ಅರ್ಜಿಯನ್ನು ವಾಪಸ್ ತೆಗೆದುಕೊಂಡಿದ್ದಾನೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವಅಫ್ತಾಬ್‌ ನವೆಂಬರ್ 17 ರಂದು ಜಾಮಿನು ಅರ್ಜಿ ಸಲ್ಲಿಸಿದ್ದ. ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿತ್ತು. ಈ ಮಧ್ಯೆ ಆರೋಪಿ ಜಾಮೀನು ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾನೆ.

ಅಲ್ಲದೇ ತನ್ನ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವುದು ತನ್ನ ಗಮನಕ್ಕೆ ಬಂದಿರಲಿಲ್ಲ ಎಂದು ಆರೋಪಿ ಹೇಳಿಕೊಂಡಿರುವುದಾಗಿ ವರದಿ ತಿಳಿಸಿದೆ.

ಅಫ್ತಾಬ್‌,ಶ್ರದ್ಧಾ ಅವರನ್ನು ದಕ್ಷಿಣ ದೆಹಲಿಯ ಮಹ್ರೌಲಿಯಲ್ಲಿರುವ ತನ್ನ ಫ್ಲ್ಯಾಟ್‌ನಲ್ಲಿ ಮೇತಿಂಗಳಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದ. ನಂತರಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, 300 ಲೀಟರ್ ಸಾಮರ್ಥ್ಯದ ಫ್ರಿಜ್‌ನಲ್ಲಿ ಸುಮಾರು ಮೂರು ವಾರಗಳವರೆಗೆ ಇರಿಸಿದ್ದ. ನಂತರ ಅವುಗಳನ್ನು ನಗರದ ವಿವಿಧೆಡೆ ಮತ್ತು ಛತರ್‌ಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳವರೆಗೆ ಒಂದೊಂದಾಗಿ ಬಿಸಾಡಿದ್ದ.

'ಸಿಟ್ಟಿನ ಭರದಲ್ಲಿ ಅಪರಾಧ ಎಸಗಿದೆ' ಎಂದು ಪೂನಾವಾಲಾ ‌ಒಪ್ಪಿಕೊಂಡಿದ್ದಾನೆ.ಪೊಲೀಸ್‌ ತನಿಖೆಯಲ್ಲಿ ನೀಡಿರುವ ತಪ್ಪೊಪ್ಪಿಗೆ ಹೇಳಿಕೆಗಳು ಮಂಪರು ಪರೀಕ್ಷೆ ಮತ್ತು ಸುಳ್ಳುಪತ್ತೆ ಪರೀಕ್ಷೆ ಎರಡರಲ್ಲೂ ಒಂದೇ ರೀತಿ ಇದ್ದು, ಎರಡರ ಫಲಿತಾಂಶವೂ ತಾಳೆಯಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT