ಶನಿವಾರ, ಜನವರಿ 28, 2023
16 °C

ಶ್ರದ್ಧಾ ಹತ್ಯೆ ಪ್ರಕರಣ: ಅಫ್ತಾಬ್‌ ಅಮೀನ್‌ ಪೂನಾವಾಲಾ ನ್ಯಾಯಾಂಗ ಬಂಧನಕ್ಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಬೈ ಮೂಲದ ಕಾಲ್‌ಸೆಂಟರ್‌ ಉದ್ಯೋಗಿ, ತನ್ನ ಸಹಜೀವನ ಸಂಗಾತಿ ಶ್ರದ್ಧಾ ವಾಲಕರ್‌ ಕೊಲೆ ಪ್ರಕರಣದ ಆರೋಪಿ ಅಫ್ತಾಬ್‌ ಅಮೀನ್‌ ಪೂನಾವಾಲಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕೊಲೆ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ ಎಂದು ದೆಹಲಿ ಪೊಲೀಸರು ಆರೋಪಿಯ ಕಸ್ಟಡಿ ಅವಧಿ ವಿಸ್ತರಣೆಗೆ ಮನವಿ ಮಾಡುವ ಸಾಧ್ಯತೆ ಇದೆ ಎಂದು ಈ ಮೊದಲು ವರದಿಯಾಗಿತ್ತು.

ದಕ್ಷಿಣ ದೆಹಲಿಯ ಮಹ್ರೌಲಿಯ ತನ್ನ ಫ್ಲ್ಯಾಟ್‌ನಲ್ಲಿ ಆಫ್ತಾಬ್‌ ಅಮೀನ್‌ ಪೂನಾವಾಲಾ ಕಳೆದ ಮೇನಲ್ಲಿ ಶ್ರದ್ಧಾ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ. ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, 300 ಲೀಟರ್ ಸಾಮರ್ಥ್ಯದ ಫ್ರಿಜ್‌ನಲ್ಲಿ ಸುಮಾರು ಮೂರು ವಾರಗಳವರೆಗೆ ಇರಿಸಿದ್ದ. ನಂತರ ಅವುಗಳನ್ನು ನಗರದ ವಿವಿಧೆಡೆ ಮತ್ತು ಛತರ್‌ಪುರ ಸಮೀಪದ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳವರೆಗೆ ಒಂದೊಂದಾಗಿ ಬಿಸಾಡಿದ್ದ.

'ಸಿಟ್ಟಿನ ಭರದಲ್ಲಿ ಅಪರಾಧ ಎಸಗಿದೆ' ಎಂದು ಪೂನಾವಾಲ ಈಗಾಗಲೇ ಒಪ್ಪಿಕೊಂಡಿದ್ದಾನೆ.

ಇವನ್ನೂ ಓದಿ

ಅಫ್ತಾಬ್‌ ಅಮೀನ್‌ ಯಾರು? ಇದೊಂದು ಲವ್‌ ಜಿಹಾದ್‌ ಪ್ರಕರಣವೇ?
ಶ್ರದ್ಧಾ ಕೊಲೆ ಪ್ರಕರಣ: ಗಾಯದ ಚಿಕಿತ್ಸೆಗಾಗಿ ವೈದ್ಯರ ಬಳಿ ಹೋಗಿದ್ದ ಅಫ್ತಾಬ್‌


    ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

    ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

    ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

    ಈ ವಿಭಾಗದಿಂದ ಇನ್ನಷ್ಟು