ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರದ್ಧಾ ವಾಲಕರ್‌ ಹಂತಕನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು: ಸಂಜಯ್ ರಾವುತ್

Last Updated 26 ನವೆಂಬರ್ 2022, 11:30 IST
ಅಕ್ಷರ ಗಾತ್ರ

ಮುಂಬೈ: ಕಾಲ್‌ಸೆಂಟರ್‌ ಉದ್ಯೋಗಿ, ಮುಂಬೈ ಮೂಲದ ಶ್ರದ್ಧಾ ವಾಲಕರ್‌ ಹಂತಕನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಶಿವಸೇನಾ ಸಂಸ‌ದ ಸಂಜಯ್ ರಾವುತ್ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮಾಜದಲ್ಲಿ ಮಹಿಳೆಯರು ಜಾಗರೂಕರಾಗಿರಬೇಕು. ಶ್ರದ್ಧಾ ಹತ್ಯೆ ಪ್ರಕರಣವನ್ನು ಸಾರ್ವಜನಿಕರು ‘ಲವ್ ಜಿಹಾದ್’ ಅಥವಾ ಇನ್ನೇನಾದರೂ ಕರೆಯಬಹುದು. ಆದರೆ, ಮಹಿಳೆಯರು ಸಾವಿಗೀಡಾಗುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಕಾನೂನು ಏನನ್ನೂ ಮಾಡಲು ಸಾಧ್ಯವಿಲ್ಲ. ಅದನ್ನು ಸಮಾಜವೇ ನಿಭಾಯಿಸಬೇಕು’ ಎಂದು ಹೇಳಿದ್ದಾರೆ.

ಶ್ರದ್ಧಾ ವಾಲಕರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅಫ್ತಾಬ್ ಅಮೀನ್ ಪೂನಾವಾಲಾನನ್ನು (28) ‌ದೆಹಲಿ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್‌ ಪ್ರೇಯಸಿ ಶ್ರದ್ಧಾಳ ಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿಟ್ಟು, ನಗರದಾದ್ಯಂತ ಹಲವು ದಿನಗಳ ಕಾಲ ಎಸೆದಿದ್ದ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT