ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ: ಸಿಎಂ ಅಮರಿಂದರ್‌ಗೆ ಹಿನ್ನಡೆ

Last Updated 18 ಜುಲೈ 2021, 18:09 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ ಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷನಾಗಿ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ವರಿಷ್ಠರು ಭಾನುವಾರ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ವಿರೋಧದ ಮಧ್ಯೆಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ಮಧ್ಯೆ ಹಲವು ತಿಂಗಳಿನಿಂದ ಭಿನ್ನಮತವಿತ್ತು. ಈ ಸಂಬಂಧ ಸಿಧು ಅವರು ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದರ ಮಧ್ಯೆಯೂ ಪಂಜಾಬ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ, ಪಕ್ಷದ ಹಿರಿಯ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ ವದಂತಿ ಹರಡಿತ್ತು. ಈಗ ಸಿಧು ಅವರನ್ನು ನೇಮಕ ಮಾಡುವ ಮೂಲಕ ಪಕ್ಷವು ಈ ವದಂತಿಗೆ ಕೊನೆಹಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT