ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಷಣಾ ಸಾಮಗ್ರಿ ರಫ್ತು ಸಾರ್ವಕಾಲಿಕ ಗರಿಷ್ಠ ₹15,920 ಕೋಟಿಗೆ ಏರಿಕೆ

Last Updated 1 ಏಪ್ರಿಲ್ 2023, 6:33 IST
ಅಕ್ಷರ ಗಾತ್ರ

ನವದೆಹಲಿ: ರಕ್ಷಣಾ ಸಾಮಗ್ರಿ ರಫ್ತು ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ ಕೆಲವು ವರ್ಷಗಳಿಂದ ರಕ್ಷಣಾ ವಲಯದಲ್ಲಿನ ಸುಧಾರಣೆಗಳಿಂದ ಉತ್ತಮ ಫಲಿತಾಂಶ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಭಾರತವನ್ನು ರಕ್ಷಣಾ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

2022–23ರ ಆರ್ಥಿಕ ವರ್ಷ ಶುಕ್ರವಾರ ಕೊನೆಗೊಂಡಿದೆ. ಭಾರತದ ರಕ್ಷಣಾ ರಫ್ತು ಸಾರ್ವಕಾಲಿಕ ಗರಿಷ್ಠ ₹15,920 ಕೋಟಿಗೆ ತಲುಪಿದೆ. ದೇಶದ ಗಮನಾರ್ಹ ಸಾಧನೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದರು.

ಸಿಂಗ್ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅತ್ಯುತ್ತಮ! ಭಾರತವನ್ನು 'ಮೇಕ್ ಇನ್ ಇಂಡಿಯಾ' ಕಡೆಗೆ ಕರೆದೊಯ್ಯಲು ಉತ್ತಮವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ರಕ್ಷಣಾ ವಲಯದಲ್ಲಿನ ಸುಧಾರಣೆಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತಿವೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT