ಗುರುವಾರ , ಮೇ 13, 2021
19 °C

ಲಸಿಕೆ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳ ನಿರ್ಬಂಧ ಕೈಬಿಡಲು ಅಮೆರಿಕಕ್ಕೆ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ : ಕೋವಿಡ್ ಲಸಿಕೆ ತಯಾರಿಕೆಗೆ ಅಗತ್ಯವಿರುವ ಕಚ್ಚಾವಸ್ತುಗಳ ಕೊರತೆ ಉಂಟಾಗಿದೆ. ಹೀಗಾಗಿ ಕಚ್ಚಾವಸ್ತುಗಳ ರಫ್ತಿನ ಮೇಲೆ ಹಾಕಿರುವ ನಿರ್ಬಂಧವನ್ನು ತೆರವು ಮಾಡಿ ಎಂದು ಸೀರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾದ ಸಿಇಒ ಆದಾರ್ ಪೂನಾವಾಲಾ ಅವರು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಅಮೆರಿಕದಲ್ಲಿ ಲಸಿಕೆ ತಯಾರಿಕೆಗೆ ಕಚ್ಚಾವಸ್ತುಗಳ ಕೊರತೆ ಆಗದೇ ಇರಲಿ ಎಂದು, ಆ ವಸ್ತುಗಳ ರಫ್ತಿನ ಮೇಲೆ ಜೋ ಬೈಡನ್ ಅವರ ಸರ್ಕಾರವು ನಿರ್ಬಂಧ ಹೇರಿದೆ.

‘ಕೋವಿಡ್‌ ವಿರುದ್ಧದ ಹೋರಾಟದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡುತ್ತಿದ್ದೇವೆ ಎನ್ನುವುದಾದರೆ, ಕಚ್ಚಾವಸ್ತುಗಳ ರಫ್ತಿನ ಮೇಲೆ ಅಮೆರಿಕದಲ್ಲಿ ಹೇರಿರುವ ನಿರ್ಬಂಧವನ್ನು ತೆರವು ಮಾಡಿ ಎಂದು ಅಮೆರಿಕದ ಹೊರಗಿರುವ ಎಲ್ಲಾ ದೇಶಗಳ ಲಸಿಕೆ ತಯಾರಕರ ಪರವಾಗಿ ನಿಮ್ಮನ್ನು ಕೇಳಿಕೊಳ್ಳುತ್ತಿದ್ದೇನೆ’ ಎಂದು ಪೂನಾವಾಲಾ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು