ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಶೀಲ್ಡ್‌ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಜಾಧವ್‌ ನಿಧನ

Last Updated 8 ಡಿಸೆಂಬರ್ 2021, 15:51 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್‌–19 ಲಸಿಕೆ ಕೋವಿಶೀಲ್ಡ್‌ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ, ಸೀರಮ್ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಸುರೇಶ್ ಜಾಧವ್‌ (72) ದೀರ್ಘಕಾಲ ಅನಾರೋಗ್ಯದಿಂದ ಬುಧವಾರ ಪುಣೆಯಲ್ಲಿ ನಿಧನರಾದರು.

ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ, ಜಾಧವ್ ಅವರು ಸಹ್ಯಾದ್ರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ಸೀರಮ್ ಇನ್‌ಸ್ಟಿಟ್ಯೂಟ್‌ನ ವಿವಿಧ ಲಸಿಕೆಗಳಿಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಪಡೆಯುವಲ್ಲಿ ಡಾ. ಜಾಧವ್ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಸಂಸ್ಥೆಯು ವಿಶ್ವದ ಅತಿದೊಡ್ಡ ಲಸಿಕೆ ತಯಾರಕರಲ್ಲಿ ಒಂದಾಗಿದೆ ಮತ್ತು 140 ಕ್ಕೂ ಹೆಚ್ಚು ದೇಶಗಳಿಗೆ ಸೇವೆ ಸಲ್ಲಿಸುತ್ತಿದೆ.

ಡಾ.ಜಾಧವ್ ಅವರು ಎಂ.ಫಾರಂ ನಂತರ ನಾಗಪುರ ವಿಶ್ವವಿದ್ಯಾಲಯದಲ್ಲಿ ಪಿ.ಎಚ್‌.ಡಿ ಪದವಿ ಪಡೆದಿದ್ದಾರೆ. 1970 ರಲ್ಲಿ ಸಿಎಸ್‌ಐಆರ್‌ನ ಸಂಶೋಧನಾ ಫೆಲೋಶಿಪ್‌ನೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಜಾಧವ್‌ ಅವರು 1979ರಲ್ಲಿ ಪುಣೆಯ ಸೀರಮ್‌ ಸಂಸ್ಥೆ ಸೇರಿದರು. 1992ರಿಂದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.2004 ರಿಂದ 2008 ರ ವರೆಗೆ 5 ವರ್ಷಗಳ ಕಾಲ ಅಭಿವೃದ್ಧಿಶೀಲ ರಾಷ್ಟ್ರಗಳ ಲಸಿಕೆ ತಯಾರಕರ ನೆಟ್‌ವರ್ಕ್‌ನ (ಡಿಸಿವಿಎಂಎನ್‌) ಅಧ್ಯಕ್ಷರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT