ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕಕ್ಕೆ ಕೋವೊವ್ಯಾಕ್ಸ್‌ ಲಸಿಕೆ ರಫ್ತು ಮಾಡಲು ಅನುಮತಿ

Last Updated 1 ಜುಲೈ 2022, 14:20 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಲಸಿಕೆ ಕೋವೊವ್ಯಾಕ್ಸ್‌ನ 32.4 ಲಕ್ಷ ಡೋಸ್‌ಗಳನ್ನು ‘ನುವಾಕ್ಸೊವಿಡ್’ ಹೆಸರಿನಲ್ಲಿ ಅಮೆರಿಕಕ್ಕೆ ರಫ್ತು ಮಾಡಲು ಕೇಂದ್ರ ಸರ್ಕಾರವು ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾಕ್ಕೆ (ಎಸ್‌ಐಐ) ಶುಕ್ರವಾರ ಅನುಮತಿ ನೀಡಿದೆ.

ಜುಲೈ 3ರಂದು ಲಸಿಕೆ ರವಾನೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಲಸಿಕೆಯನ್ನು ಅಮೆರಿಕಕ್ಕೆ ರಫ್ತು ಮಾಡಲು ಅನುಮೋದನೆ ನೀಡುವಂತೆ ಎಸ್‌ಐಐನ ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಜೂನ್‌ 29 ರಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT