ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶಕ್ಕೆ ಅನಿವಾರ್ಯವಿದ್ದಾಗ ಪ್ರಧಾನಿ ಮೋದಿ ಮೌನ: ಸೋನಿಯಾ ಗಾಂಧಿ ಟೀಕೆ

Last Updated 14 ಮೇ 2022, 2:44 IST
ಅಕ್ಷರ ಗಾತ್ರ

ಉದಯಪುರ: ‘ನಮ್ಮ ಪ್ರಧಾನಿ ಬೇರೆಲ್ಲಾ ಸಮಯದಲ್ಲಿ ಬಹಳ ನಿರರ್ಗಳವಾಗಿ ಮಾತನಾಡುತ್ತಾರೆ. ಆದರೆ, ದೇಶಕ್ಕೆ ಅವರ ಉಪಶಮನಕಾರಿ ಸ್ಪರ್ಶದ ಅನಿವಾರ್ಯ ಇರುವಾಗ ಮೌನವಾಗಿದ್ದಾರೆ’ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಚಿಂತನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ.

‘ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಸದಾ, ‘ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ’ ಎಂದು ಹೇಳುತ್ತಿರುತ್ತಾರೆ. ಅವರ ಪ್ರಕಾರ ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ ಎಂದರೆ ದೇಶವನ್ನು ಶಾಶ್ವತವಾಗಿ ಧ್ರುವೀಕರಣ ಮಾಡುವುದು, ಅಲ್ಪಸಂಖ್ಯಾತರನ್ನು ತುಳಿಯುವುದು ಮತ್ತು ರಾಜಕೀಯ ವಿರೋಧಿಗಳನ್ನು ಬೆದರಿಸುವುದು ಎಂಬುದು ಈಗ ನಿಚ್ಚಳವಾಗಿಹೋಗಿದೆ’ ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT