ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಕಿ ಲತಾ ಮಂಗೇಶ್ಕರ್‌ಗೆ ಕೋವಿಡ್‌: ಐಸಿಯುಗೆ ದಾಖಲು

Last Updated 11 ಜನವರಿ 2022, 7:37 IST
ಅಕ್ಷರ ಗಾತ್ರ

ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್‌ (92) ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರಿಗೆ ಕೊರೊನಾ ವೈರಸ್‌ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಮುನ್ನೆಚ್ಚರಿಕೆಯ ಕಾರಣಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿರುವುದು ತಿಳಿದು ಬಂದಿರುವುದಾಗಿ ಎಎನ್‌ಐ ಟ್ವೀಟಿಸಿದೆ.

'ಲತಾ ಮಂಗೇಶ್ಕರ್ ಅವರ ವಯಸ್ಸಿನ ಕಾರಣದಿಂದಾಗಿ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಖಾಸಗಿತನಕ್ಕೆ ಅವಕಾಶ ನೀಡಿ ಹಾಗೂ ದೀದಿಗಾಗಿ ನಿಮ್ಮ ಪ್ರಾರ್ಥನೆಗಳಿರಲಿ' ಎಂದು ಲತಾ ಮಂಗೇಶ್ಕರ್‌ ಅವರ ಸೋದರ ಸೊಸೆ ರಚನಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT