ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | ಆಂಧ್ರ ಪ್ರದೇಶಲ್ಲಿ 2.50 ಲಕ್ಷ ದಾಟಿದ ಪ್ರಕರಣಗಳು

Last Updated 12 ಆಗಸ್ಟ್ 2020, 16:34 IST
ಅಕ್ಷರ ಗಾತ್ರ

ನವದೆಹಲಿ: ಬುಧವಾರ ಆಂಧ್ರ ಪ್ರದೇಶದಲ್ಲಿ ಕೋವಿಡ್‌–19 ಸೋಂಕು ಪ್ರಕರಣಗಳ ಸಂಖ್ಯೆ 2.50 ಲಕ್ಷ ದಾಟಿದೆ ಹಾಗೂ ಕರ್ನಾಟಕದಲ್ಲಿ ಒಂದೇ ದಿನ ಅತಿ ಹೆಚ್ಚು ಕೋವಿಡ್‌ ದೃಢಪಟ್ಟ ಪ್ರಕರಣಗಳು ದಾಖಲಾಗಿವೆ.

ಕೇರಳ ಹಾಗೂ ತೆಲಂಗಾಣದಲ್ಲಿ 1,000ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, ತಮಿಳುನಾಡಿನಲ್ಲಿ ಸೋಂಕಿನಿಂದ 100ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಐದು ದಿನಗಳ ಹಿಂದೆ, ಆಗಸ್ಟ್‌ 7ರಂದು ಆಂಧ್ರ ಪ್ರದೇಶದಲ್ಲಿ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 2 ಲಕ್ಷ ದಾಟಿತ್ತು. ಕಳೆದ 24 ಗಂಟೆಗಳಲ್ಲಿ 9,597 ಪ್ರಕರಣಗಳು ವರದಿಯಾಗಿವೆ. ಒಟ್ಟು ಕೋವಿಡ್‌ ಪ್ರಕರಣಗಳ ಲೆಕ್ಕದಲ್ಲಿ ದೇಶದಲ್ಲಿ ಮಹಾರಾಷ್ಟ್ರ, ತಮಿಳುನಾಡು ನಂತರದ ಸ್ಥಾನದಲ್ಲಿ ಆಂಧ್ರ ಪ್ರದೇಶವಿದೆ.

ಆಂಧ್ರ ಪ್ರದೇಶದಲ್ಲಿ 2,54,146 ಒಟ್ಟು ಪ್ರಕರಣಗಳ ಪೈಕಿ 90,425 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 12,712 ಹೊಸ ಪ್ರಕರಣಗಳು ವರದಿಯಾಗಿವೆ, 13,804 ಮಂದಿ ಗುಣಮುಖರಾಗಿದ್ದಾರೆ ಹಾಗೂ 344 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳು 5,48,313 ತಲುಪಿದ್ದು, ಈವರೆಗೂ 18,650 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 1,47,513 ಸಕ್ರಿಯ ಪ್ರಕರಣಗಳಿವೆ.

ಮಧ್ಯ ಪ್ರದೇಶದಲ್ಲಿ ಬುಧವಾರ 870 ಹೊಸ ಪ್ರಕರಣಗಳು ದಾಖಲಾಗಿದ್ದು, 15 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 41,604 ತಲುಪಿದೆ.

ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 60,963 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 834 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,29,639ಕ್ಕೆ ಏರಿಕೆಯಾಗಿದೆ. ಈವರೆಗೆ 46,091 ಮಂದಿ ಸಾವಿಗೀಡಾಗಿದ್ದು, 1,63,9600 ಮಂದಿ ಗುಣಮುಖರಾಗಿದ್ದಾರೆ. ಸದ್ಯ 6,43,948 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಈ ಮಧ್ಯೆ, ಆಗಸ್ಟ್ 11ರ ವರೆಗೆ ದೇಶದಲ್ಲಿ 2.60 ಕೋಟಿಗೂ ಹೆಚ್ಚು ಕೋವಿಡ್–19 ಪರೀಕ್ಷೆ ನಡೆಸಲಾಗಿದೆ. 7,33,449 ಮಾದರಿಗಳನ್ನು ನಿನ್ನೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT