ಶನಿವಾರ, ಅಕ್ಟೋಬರ್ 31, 2020
27 °C

ಶಿರಾ, ಆರ್‌.ಆರ್.‌ ನಗರ ವಿಧಾನಸಭೆ ಕ್ಷೇತ್ರ ಉಪಚುನಾವಣೆ ಘೋಷಣೆ; ನ. 3ರಂದು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯದ ಶಿರಾ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಘೋಷಿಸಲಾಗಿದೆ.

ಶಾಸಕ ಸತ್ಯನಾರಾಯಣ ಅವರ ನಿಧನದಿಂದಾಗಿ ತೆರವಾಗಿದ್ದ ಶಿರಾ ಕ್ಷೇತ್ರ ಹಾಗೂ ಶಾಸಕ ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ‌ ಕ್ಷೇತ್ರಗಳ ಉಪಚುನಾವಣೆಯು ನವೆಂಬರ್ 3ರಂದು ನಡೆಯುವುದಾಗಿ ಕೇಂದ್ರ ಚುನಾವಣೆ ಆಯೋಗ ಘೋಷಿಸಿದೆ.

ಅಕ್ಟೋಬರ್ 9 ರಂದು ಅಧಿಸೂಚನೆ ಹೊರಡಿಸಲಿದ್ದು, ಅಕ್ಟೋಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅಕ್ಟೋಬರ್ 17ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. 

ನವೆಂಬರ್ 3ಕ್ಕೆ ಉಭಯ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು