ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಖಿಂಪುರ ಖೇರಿ: 5,000 ಪುಟಗಳ ಚಾರ್ಜ್ ಶೀಟ್, ಆಶಿಶ್ ಮಿಶ್ರಾ ಪ್ರಧಾನ ಆರೋಪಿ

Last Updated 3 ಜನವರಿ 2022, 9:28 IST
ಅಕ್ಷರ ಗಾತ್ರ

ಲಖಿಂಪುರ-ಖೇರಿ: ಉತ್ತರ ಪ್ರದೇಶದ ಲಖಿಂಪುರ-ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಇಟಿ) ಸೋಮವಾರ ಸುಮಾರು 5,000 ಪುಟಗಳ ಚಾರ್ಜ್ ಶೀಟ್ ಅನ್ನು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರಕರಣದಲ್ಲಿ ಪ್ರಧಾನ ಆರೋಪಿ ಎಂದು ಉಲ್ಲೇಖಿಸಲಾಗಿದೆ.

2021 ಅಕ್ಟೋಬರ್‌ 3ರಂದು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರೈತರ ಮೇಲೆ ಕಾರು ಚಲಾಯಿಸಲಾಗಿತ್ತು. ಬಳಿಕ ಹಿಂಸಾಚಾರ ನಡೆದಿತ್ತು.

ಅಂದು ನಡೆದ ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತ ಸೇರಿ ಒಟ್ಟು ಎಂಟು ಮಂದಿ ಸಾವಿಗೀಡಾಗಿದ್ದರು. ಇದರಲ್ಲಿ ನಾಲ್ವರು ರೈತರು, ಓರ್ವ ಪತ್ರಕರ್ತ, ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಚಾಲಕ ಸೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ಪ್ರಕರಣದಲ್ಲಿ ವೀರೇಂದ್ರ ಶುಕ್ಲಾ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಆರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಮೂಲಕ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 201ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ತಿಳಿಸಿದ್ದಾರೆ.

ರೈತರ ಮೇಲೆ ಕಾರು ಚಲಾಯಿಸಿರುವ ಮೂರು ಎಸ್‌ಯುವಿಗಳ ಚಾಲಕರು ಸೇರಿದಂತೆ ಆರೋಪಿಗಳನ್ನು ಲಖಿಂಪುರ ಖೇರಿ ಜೈಲಿನಲ್ಲಿರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT