ನವದೆಹಲಿ: ಸಿತಾರ್ ವಾದಕ ಪಂಡಿತ್ ದೇವವ್ರತ ಚೌಧರಿ (85) ಅವರು ಕೋವಿಡ್ ಸಂಬಂಧಿತ ಸಮಸ್ಯೆಯಿಂದ ದೆಹಲಿಯ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.

ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು ದೇವು ಚೌಧರಿ ಎಂದೇ ಖ್ಯಾತರಾಗಿದ್ದರು.

‘ನನ್ನ ತಂದೆ ಪಂಡಿತ್ ದೇವು ಚೌಧರಿ ಅವರು ನಿಧನರಾದರು. ಕೋವಿಡ್ ಪೀಡಿತರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಮರೆಗುಳಿತನಕ್ಕೆ ಸಂಬಂಧಿಸಿದ ಸಮಸ್ಯೆಯೂ ಇತ್ತು. ಶುಕ್ರವಾರ ಮಧ್ಯರಾತ್ರಿ ಅವರನ್ನು ಐಸಿಯುನ ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಬಳಿಕ ಅವರಿಗೆ ಹೃದಯಾಘಾತ ಸಂಭವಿಸಿತು. ಎಲ್ಲಾ ರೀತಿಯ ಪ್ರಾರ್ಥನೆ ಮತ್ತು ಪ್ರಯತ್ನಗಳ ಬಳಿಕವೂ ಅವರನ್ನು ಉಳಿಸಲು ಸಾಧ್ಯವಾಗಿಲ್ಲ’ ಎಂದು ದೇವವ್ರತ ಚೌಧರಿ ಅವರ ಪುತ್ರ ಪ್ರತೀಕ್ ಚೌಧರಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅವರನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.