ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3ನೇ ಅವಧಿಗೆ ಸಿಪಿಐ(ಎಂ) ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ ಮರು ಆಯ್ಕೆ

Last Updated 10 ಏಪ್ರಿಲ್ 2022, 11:21 IST
ಅಕ್ಷರ ಗಾತ್ರ

ನವದೆಹಲಿ: ಸಿಪಿಐ(ಎಂ)ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ ಭಾನುವಾರ ಆಯ್ಕೆಯಾಗಿದ್ದಾರೆ. ಅವರು ಮೂರನೇ ಅವಧಿಗೆ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ವಿಶೇಷ.

ಪಕ್ಷದ ಪಾಲಿಟ್ ಬ್ಯೂರೋ ಸದಸ್ಯರಾಗಿದ್ದ ಸೀತಾರಾಂ ಅವರನ್ನು 2015ರಲ್ಲಿ ನಡೆದ ಪಕ್ಷದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. 2018ರಲ್ಲಿ ಅವರು ಎರಡನೇ ಅವಧಿಗೆ ಆಯ್ಕೆಯಾಗಿದ್ದರು.

ಪಾಲಿಟ್ ಬ್ಯೂರೋ ಕೇಂದ್ರ ಸಮಿತಿ ಸಭೆಯಲ್ಲಿ ಸೀತಾರಾಂ ಯೆಚೂರಿ ಅವರನ್ನು ಮೂರನೇ ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಶೋಕ್‌ ದವಲೆಹಾಗೂ ರಾಮಚಂದ್ರ ದೊಮೆ ಅವರ ಹೆಸರುಗಳು ಕೇಳಿಬಂದಿದ್ದವು.

ಈ ಹಿಂದೆ ಪ್ರಕಾಶ್‌ ಕಾರಟ್‌ ಕೂಡ ಎರಡು ಸಲ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆಯಾಗಿದ್ದರು. ಅವರು 2005 ರಿಂದ 2015ರವರೆಗೂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT