ಗುರುವಾರ , ಮೇ 13, 2021
18 °C

ಸೀತಾರಾಮ್ ಯೆಚೂರಿ ಅವರ ಹಿರಿಯ ಪುತ್ರ ಆಶಿಶ್ ಕೋವಿಡ್‌ನಿಂದ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ತಮ್ಮ ಹಿರಿಯ ಮಗ ಆಶಿಶ್ ಕೋವಿಡ್‌ನಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ತಿಳಿಸಿದ್ದಾರೆ.

‘ನನ್ನ ಹಿರಿಯ ಮಗ ಆಶಿಶ್ ಯೆಚೂರಿಯನ್ನು ಕೋವಿಡ್‌ನಿಂದ ಇಂದು ಬೆಳಿಗ್ಗೆ ಕಳೆದುಕೊಂಡೆ ಎಂದು ನಾನು ತಿಳಿಸಬೇಕಾಗಿರುವುದು ಬಹಳ ದುಃಖದ ಸಂಗತಿಯಾಗಿದೆ. ನಮಗೆ ಭರವಸೆ ಮತ್ತು ಅವನಿಗೆ ಉತ್ತಮ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು, ಮುಂಚೂಣಿ ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು ಮತ್ತು ನಮ್ಮೊಂದಿಗೆ ನಿಂತ ಅಸಂಖ್ಯಾತ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ಯೆಚೂರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜೂನ್ 9 ರಂದು 35 ನೇ ವರ್ಷಕ್ಕೆ ಕಾಲಿಡುತ್ತಿದ್ದ ಆಶಿಶ್, ಗುರ್‌ ಗಾಂವ್‌ನ ಮೇದಾಂತ ಆಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ವಿರುದ್ಧದ ಎರಡು ವಾರಗಳ ಹೋರಾಟದ ಬಳಿಕ ಬೆಳಿಗ್ಗೆ 5.30 ಕ್ಕೆ ಅವರು ಹಠಾತ್ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಪಿಟಿಐಗೆ ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು