ಕೊಳದಲ್ಲಿ ಮುಳುಗಿ ಆರು ಮಕ್ಕಳು ಸಾವು
ಗುರುಗ್ರಾಮ (ಪಿಟಿಐ): ಹರಿಯಾಣದ ಗುರುಗ್ರಾಮದಲ್ಲಿ ಮಳೆನೀರು ತುಂಬಿದ್ದ ಕೊಳದಲ್ಲಿ ಸ್ನಾನ ಮಾಡಲು ಭಾನುವಾರ ಮಧ್ಯಾಹ್ನ ಇಳಿದಿದ್ದ ಆರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರು 8ರಿಂದ 13 ವರ್ಷದೊಳಗಿನ ಬಾಲಕರು. ಶಂಕರ್ ವಿಹಾರ್ ಕಾಲೋನಿಯವರು. ಶವಗಳನ್ನು ಹೊರ ತೆಗೆಯಲಾಗಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮೃತ ಮಕ್ಕಳ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.