ಗುರುವಾರ , ಅಕ್ಟೋಬರ್ 1, 2020
28 °C

ಮಣಿಪುರ: ಕಾಂಗ್ರೆಸ್‌ನ ಆರು ಶಾಸಕರ ರಾಜೀನಾಮೆ

ಪಿಟಿಐ Updated:

ಅಕ್ಷರ ಗಾತ್ರ : | |

ಇಂಫಾಲ್‌: ಮಣಿಪುರದಲ್ಲಿ ಕಾಂಗ್ರೆಸ್ ಪಕ್ಷದ ಆರು ಶಾಸಕರು ಮಂಗಳವಾರ ಸ್ಪೀಕರ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಸೋಮವಾರ ನಡೆದಿದ್ದ ಒಂದು ದಿನದ ವಿಶೇಷ ಅಧಿವೇಶನಕ್ಕೆ ಗೈರು ಹಾಜರಾಗುವ ಮೂಲಕ ಪಕ್ಷದ ವಿಪ್ ಉಲ್ಲಂಘಿಸಿದ ಎಂಟು ಶಾಸಕರಲ್ಲಿ ಈ ಆರು ಮಂದಿಯೂ ಸೇರಿದ್ದರು. ಎನ್.ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಸೋಮವಾರ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿತ್ತು.

ಶಾಸಕ ಒ ಹೆನ್ರಿ ಸಿಂಗ್, ಒನಂ ಲುಖೋಯಿ, ಮೊಹಮ್ಮದ್ ಅಬ್ದುಲ್ ನಸೀರ್, ಪಾನೊಂ ಬ್ರೊಜೆನ್, ಗಮ್ ಥಂಗ್ ಹಾಕಿಪ್, ಗಿನ್ ಸುನಾಹ್ ರಾಜೀನಾಮೆ ಸಲ್ಲಿಸಿದವರಾಗಿದ್ದಾರೆ.

‘ನಮಗೆ ಒ ಇಬೊಬಿ ಸಿಂಗ್ ಅವರ ನಾಯಕತ್ವದಲ್ಲಿ ವಿಶ್ವಾಸವಿಲ್ಲ. ಅವರಿಂದಾಗಿ ಕಾಂಗ್ರೆಸ್ ಸರ್ಕಾರ ರಚಿಸಲು ವಿಫಲವಾಗಿದೆ’ ಎಂದು ರಾಜೀನಾಮೆ ಸಲ್ಲಿಸಿದ ಶಾಸಕರು ಕಾರಣ ಹೇಳಿದ್ದಾರೆ.

‘ರಾಜೀನಾಮೆಯನ್ನು ಸ್ಪೀಕರ್ ಅವನ್ನು ಇನ್ನೂ ಅಂಗೀಕರಿಸಿಲ್ಲ. ನಾವು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಲಿದ್ದೇವೆ’ ಎಂದು ಹೆನ್ರಿ ಸಿಂಗ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು