ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಬಾಂಬ್ ದಾಳಿಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತ ಸಾವು, 6 ಜನರಿಗೆ ಗಾಯ

Last Updated 6 ಮಾರ್ಚ್ 2021, 20:16 IST
ಅಕ್ಷರ ಗಾತ್ರ

ಕೋಲ್ಕತ್ತ: ಆಡಳಿತಾರೂಢ ಟಿಎಂಸಿ ಕಾರ್ಯಕ ರ್ತರು ನಡೆಸಿದ್ದರು ಎಂದು ಆರೋಪಿಸಲಾಗಿರುವ ಬಾಂಬ್ ದಾಳಿಯಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡ ಘಟನೆ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಗೊಸಾಬಾ ಎಂಬಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ವಾಪಸಾಗುತ್ತಿದ್ದಾಗ ಸ್ಥಳೀಯ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಗಾಯಾಳುಗಳ ಕುಟುಂಬದವರು ಆರೋಪಿಸಿದ್ದಾರೆ.

‘ಮನೆಯಲ್ಲಿ ತಯಾರಾಗುತ್ತಿದ್ದ ಕಚ್ಚಾಬಾಂಬ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಅದು ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಸೇರಿದ ಮನೆ’ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಗಾಯಾಳುಗಳ ಹೇಳಿಕೆಯನ್ನು ಪರಿಗಣಿಸಿ, ಅದನ್ನು ದಾಖಲಿಸಿಕೊಳ್ಳಲಾಗಿದೆ. ಮನೆಯಲ್ಲಿ ಬಾಂಬ್ ತಯಾರಾಗುತ್ತಿತ್ತು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ತನಿಖೆ ಕೈಗೊಂಡಿದ್ದು ಸ್ಥಳೀಯರ ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ.

‘ಗೊಸಾಬಾದಲ್ಲಿ ಶುಕ್ರವಾರ ರಾತ್ರಿ ಬಿಜೆಪಿ– ಟಿಎಂಸಿ ಕಾರ್ಯಕರ್ತರು ಪರಸ್ಪರ ಘರ್ಷಣೆ ನಡೆಸಿ ಕಚ್ಚಾಬಾಂಬ್ ಎಸೆದಿದ್ದಾರೆ’ ಎಂದು ಕೆಲವು ಸ್ಥಳೀಯರು ಹೇಳಿದ್ದಾರೆ. ಸ್ಥಳದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ರವಾನಿಸಲಾಗಿದೆ. ಗೊಸಾಬಾ ಮೀಸಲು ಕ್ಷೇತ್ರದಲ್ಲಿ ಏಪ್ರಿಲ್ 1ರಂದು ಮತದಾನ ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT