ಭಾನುವಾರ, ನವೆಂಬರ್ 29, 2020
20 °C

ಗುಜರಾತ್‌ನಲ್ಲಿ ಪ್ರಬಲ ಸ್ಫೋಟ: ಗೋದಾಮು ಕುಸಿದು ಆರು ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್: ಇಲ್ಲಿನ ರಾಸಾಯನಿಕ ಗೋದಾಮಿನ ಪಕ್ಕದಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿದ್ದರಿಂದ ಗೋದಾಮಿನ ಭಾಗವೊಂದು ಕುಸಿದು 6 ಮಂದಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

ಇದುವರೆಗೆ ಕಟ್ಟಡದ ಅವಶೇಷದಿಂದ ಕನಿಷ್ಠ 14 ಮಂದಿಯನ್ನು ಹೊರ ತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಎಲ್‌ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ದಾಖಲಾಗಿದ್ದ 14 ಜನರ ಪೈಕಿ ಆರು ಮಂದಿ ಸಾವನ್ನಪ್ಪಿದ್ದು, ಗಾಯಗೊಂಡಿದ್ದ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಹಮದಾಬಾದ್‌ನ ಕೈಗಾರಿಕಾ ಪ್ರದೇಶದ ಪಿರಾನಾ–ಪಿಪ್ಲಾಜ್ ರಸ್ತೆಯಲ್ಲಿರುವ ಗೋದಾಮಿನ ವಸತಿ ಕಟ್ಟಡದಲ್ಲಿ ಬೆಂಕಿಯಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ’ ಎಂದು ಡಿಸಿಪಿ ಅಶೋಕ್ ಮುನಿಯಾ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು