ಭಾನುವಾರ, ಏಪ್ರಿಲ್ 2, 2023
33 °C

ಮನೆ ಯಜಮಾನನೇ ಕೊಂದನೆ? ಗಂಡ–ಹೆಂಡತಿ, ನಾಲ್ವರು ಮಕ್ಕಳು ಶವವಾಗಿ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಉದಯಪುರ: ಗಂಡ–ಹೆಂಡತಿ ಮತ್ತು ಅವರ ನಾಲ್ಕು ಮಕ್ಕಳು ನಿಗೂಢವಾಗಿ ಸಾವಿಗೀಡಾಗಿರುವ ಪ್ರಕರಣ ರಾಜಸ್ಥಾನದ ಹಳ್ಳಿಯೊಂದರಲ್ಲಿ ಬೆಳಕಿಗೆ ಬಂದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಜಡೋಲಿ ಹಳ್ಳಿಯ ನಿವಾಸಿ, ಕುಟುಂಬದ ಮುಖ್ಯಸ್ಥ ಪಪ್ಪು ಗಾಮೇಟಿ, ಮಕ್ಕಳು ಮತ್ತು ಹೆಂಡತಿಯನ್ನು ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಪಪ್ಪು ಮತ್ತು ಆತನ ಮೂವರು ಮಕ್ಕಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಹೆಂಡತಿ ಮತ್ತು ಮತ್ತೊಂದು ಮಗುವಿನ ಶವ ಹಾಸಿಗೆ ಮೇಲೆ ಪತ್ತೆಯಾಗಿವೆ.

ವಿಧಿ ವಿಜ್ಞಾನ ತಂಡ ಮತ್ತು ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು