ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: 6 ಮಂದಿ ಸಾವು

ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಅವಘಢ ಉಂಟಾಗಿರಬಹುದು ಎಂದು ಶಂಕಿಸಲಾಗಿದೆ.
Last Updated 17 ಮಾರ್ಚ್ 2023, 2:44 IST
ಅಕ್ಷರ ಗಾತ್ರ

ಹೈದರಾಬಾದ್‌: ಇಲ್ಲಿನ ಸಿಕಂದರಾಬಾದ್‌ನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ಮಹಿಳೆ ಸಹಿತ ಆರು ಮಂದಿ ಮೃತ‍‍ಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವಿಗೆ ನಿಖರ ಕಾರಣ ಏನೆಂಬುದು ತನಿಖೆಯ ಬಳಿಕವಷ್ಟೇ ತಿಳಿಯಬೇಕಿದ್ದು, ಹೊಗೆ ದಟ್ಟೈಸಿದ್ದರಿಂದ ಉಸಿರುಗಟ್ಟಿ ಸಾವಿಗೀಡಾಗಿರಬಹುದು ಎಂದು ಹಿರಿಯ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ.

‘ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. 12 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು, ಈ ಪೈಕಿ 6 ಮಂದಿ ಸಾವಿಗೀಡಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ‘ ಎಂದು ಪೊಲೀಸರು ಹೇಳಿದ್ದಾರೆ.

ಮೃತರೆಲ್ಲರೂ ತೆಲಂಗಾಣದ ವಾರಂಗಲ್‌ ಹಾಗೂ ಖಮ್ಮನ್‌ ಜಿಲ್ಲೆಯವರಾಗಿದ್ದು, ಕಟ್ಟಡದಲ್ಲಿದ್ದ ಮಾರ್ಕೆಂಟಿಂಗ್‌ ಕಂಪನಿಯಲ್ಲಿ ಇವರೆಲ್ಲರೂ ಕೆಲಸ ಮಾಡುತ್ತಿದ್ದರು.

ಸಂಜೆ 7.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ.

ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಅವಘಡ ಉಂಟಾಗಿರಬಹುದು ಎಂದು ಶಂಕಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT