ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ನಿಂದ ಈವರೆಗೆ 6 ಸಾವಿರ ಭಾರತೀಯರನ್ನು ವಾಪಸ್ ಕರೆತರಲಾಗಿದೆ: ಕೇಂದ್ರ ಸಚಿವ

Last Updated 2 ಮಾರ್ಚ್ 2022, 8:44 IST
ಅಕ್ಷರ ಗಾತ್ರ

ಪುಣೆ: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ 20 ಸಾವಿರ ಮಂದಿ ಭಾರತೀಯರ ಪೈಕಿ ಇದುವರೆಗೆ 6 ಸಾವಿರ ಮಂದಿಯನ್ನು ದೇಶಕ್ಕೆ ವಾಪಸ್ ಕರೆತರಲಾಗಿದ್ದು, ಉಳಿದವರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆಯರಾಜ್ಯ ಸಚಿವ ವಿ.ಮುರಳೀಧರನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಕ್ರೇನ್‌ನಲ್ಲಿ ಸುಮಾರು 20 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರು ಸಿಲುಕಿಕೊಂಡಿದ್ದರು. ಅವರಲ್ಲಿ 4 ಸಾವಿರ ಜನರನ್ನು ಫೆಬ್ರುವರಿ ಮೂರನೇ ವಾರದಲ್ಲಿ ಭಾರತಕ್ಕೆ ಕರೆತರಲಾಯಿತು. ಹೆಚ್ಚುವರಿ 2 ಸಾವಿರ ವಿದ್ಯಾರ್ಥಿಗಳನ್ನು ಮಂಗಳವಾರದವರೆಗೆ ಭಾರತಕ್ಕೆ ಕರೆತರಲಾಗಿದೆ’ ಎಂದು ವಿವರಿಸಿದ್ದಾರೆ.

ಸಂಕಷ್ಟಕ್ಕೆ ಸಿಲುಕಿರುವವರನ್ನು ಭಾರತಕ್ಕೆ ಕರೆತರಲು ರಕ್ಷಣಾ ವಿಮಾನಗಳನ್ನು ಬಳಸಲಾಗುತ್ತಿದೆ. ಉಕ್ರೇನ್‌ನ ನೆರೆಯ ದೇಶಗಳಾದ ರೊಮೇನಿಯಾ, ಪೋಲೆಂಡ್, ಹಂಗೇರಿ ಮತ್ತು ಸ್ಲೋವಾಕಿಯಾ ನೆರವಿನೊಂದಿಗೆ ವಿದ್ಯಾರ್ಥಿಗಳನ್ನು ಭಾರತಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಮುರಳೀಧರನ್ ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರ ‘ಆಪರೇಷನ್ ಗಂಗಾ’ ಆರಂಭಿಸಿದೆ. ಉತ್ತರ ಪ್ರದೇಶ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ‘ಆಪರೇಷನ್ ಗಂಗಾ’ ಹೆಸರನ್ನು ಬಳಸಲಾಗುತ್ತಿದೆ ಎಂಬ ಶಿವಸೇನಾ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದು ರಾಜಕೀಯ ವಿಷಯವಲ್ಲ. ಬದಲಾಗಿ ರಾಷ್ಟ್ರೀಯ ಸಮಸ್ಯೆಯಾಗಿದೆ. ಇದು ಭಾರತೀಯ ನಾಗರಿಕರ ಸುರಕ್ಷತೆಗೆ ಸಂಬಂಧಿಸಿದ್ದಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT