ಸೋಮವಾರ, ಜೂನ್ 14, 2021
23 °C

ಹಿರಿಯ ಕಾಂಗ್ರೆಸ್‌ ನಾಯಕ ರಘುನಂದನ್‌ ಲಾಲ್‌ ಭಾಟಿಯಾ ನಿಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಅಮೃತಸರ: ಹಿರಿಯ ಕಾಂಗ್ರೆಸ್‌ ನಾಯಕ, ಆರು ಬಾರಿ ಸಂಸದರಾಗಿದ್ದ ರಘುನಂದನ್‌ ಲಾಲ್‌ ಭಾಟಿಯಾ ಅವರು (100) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು ಎಂದು ಅವರ ಕುಟುಂಬದ ಸದಸ್ಯರೊಬ್ಬರು ತಿಳಿಸಿದರು.

‘ಶುಕ್ರವಾರ ರಾತ್ರಿ  ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ರಘುನಂದನ್‌ ಅವರು ಕೊನೆ ಉಸಿರೆಳೆದರು’ ಎಂದು ಅವರು ಹೇಳಿದರು.

ರಘುನಂದನ್‌ ಅವರು ಅಮೃತಸರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 1972ರಲ್ಲಿ ಮೊದಲ ಬಾರಿ ಲೋಕಸಭೆಗೆ ಚುನಾಯಿತರಾಗಿದ್ದರು. ಬಳಿಕ 1980, 1985, 1992, 1996 ಮತ್ತು 1999ರಲ್ಲೂ ಕಾಂಗ್ರೆಸ್‌ ‍‍ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

1992ರಲ್ಲಿ ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ ಅವರು, 2004ರಿಂದ 2008ರ ತನಕ ಕೇರಳ ಮತ್ತು 2008ರಿಂದ 2009ರ ತನಕ ಬಿಹಾರದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು