ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ಚೀನಾ ಗಡಿ: ಮೂಲಸೌಕರ್ಯಕ್ಕೆ ಆರು ಪಟ್ಟು ಅನುದಾನ

Last Updated 5 ಏಪ್ರಿಲ್ 2022, 14:48 IST
ಅಕ್ಷರ ಗಾತ್ರ

ನವದೆಹಲಿ: ಅರುಣಾಚಲ ಪ್ರದೇಶದ ಭಾರತ–ಚೀನಾ ಗಡಿಯುದ್ದಕ್ಕೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಸರ್ಕಾರ ಆರು ಪಟ್ಟು ಹೆಚ್ಚು ಅನುದಾನ ಹಂಚಿಕೆ ಮಾಡಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಲೋಕಸಭೆಯಲ್ಲಿ ತಿಳಿಸಿದ್ದಾರೆ.

2020–21ರಲ್ಲಿ ₹42.87 ಕೋಟಿ ಬಿಡುಗಡೆ ಮಾಡಿದ್ದರೆ, 2021–22ರಲ್ಲಿ ₹249.12 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿರುವ ಚೀನಾ, ಮ್ಯಾನ್ಮಾರ್‌ ಮತ್ತು ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಮೂಲಸೌಕರ್ಯ ಸುಧಾರಣೆಗಾಗಿ ಗಡಿ ಮೂಲಸೌಕರ್ಯ ಮತ್ತು ನಿರ್ವಹಣೆ (ಬಿಐಎಂ) ಯೋಜನೆ ಅಡಿಯಲ್ಲಿ 2021–22ನೇ ಸಾಲಿನಲ್ಲಿ ₹602.30ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ ಎಂದೂ ತಿಳಿಸಿದ್ದಾರೆ. 2020–21ನೇ ಸಾಲಿನಲ್ಲಿ ₹355.12 ಕೋಟಿ ಮಂಜೂರು ಮಾಡಲಾಗಿತ್ತು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT