ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲ್ಯಯುತ ಮಾನವ ಸಂಪನ್ಮೂಲದಿಂದ ಆರೋಗ್ಯ ಕ್ಷೇತ್ರದಲ್ಲಿ ಧನಾತ್ಮಕ ಪರಿಣಾಮ: ಮೋದಿ

Last Updated 30 ಸೆಪ್ಟೆಂಬರ್ 2021, 9:31 IST
ಅಕ್ಷರ ಗಾತ್ರ

ನವದೆಹಲಿ: ಆರೋಗ್ಯ ಕ್ಷೇತ್ರದಲ್ಲಿಕೌಶಲ್ಯಯುತ ಮಾನವ ಸಂಪನ್ಮೂಲ ಕಾರ್ಯಾಚರಿಸುವುದರಿಂದ ಆರೋಗ್ಯ ಸೇವೆಗಳ ದಕ್ಷತೆಯ ಮೇಲೆ ನೇರ ಪರಿಣಾಮ ಉಂಟಾಗಲಿದೆ. ಕೋವಿಡ್‌-19 ಸಾಂಕ್ರಾಮಿಕದ ಸಂದರ್ಭದಲ್ಲಿ ಇದರ ಅರಿವು ಹೆಚ್ಚಾಗಿ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ರಾಜಸ್ಥಾನದ ಬಾನಸ್ವಾರ, ಸಿರೋಹಿ, ಹನುಮನಗರ್‌ ಮತ್ತು ದೌಸಾ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮೋದಿ,ದೇಶದಲ್ಲಿ ಇದುವರೆಗೆ ಬರೋಬ್ಬರಿ88 ಕೋಟಿ ಡೋಸ್‌ನಷ್ಟು ಕೋವಿಡ್‌ ಲಸಿಕೆ ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ʼನುರಿತ ಮಾನವ ಸಂಪನ್ಮೂಲ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವುದರಪರಿಣಾಮವನ್ನು ಆರೋಗ್ಯ ಸೇವೆಗಳಲ್ಲಿ ಕಾಣಬಹುದಾಗಿದೆ. ಸಾಂಕ್ರಾಮಿಕ ಸಂದರ್ಭದಲ್ಲಿ ಅದರ ಪ್ರಾಮುಖ್ಯತೆಯನ್ನು ಹೆಚ್ಚಾಗಿ ಕಂಡುಕೊಂಡಿದ್ದೇವೆ. ಅದರ ಫಲವಾಗಿಯೇ ಕೇಂದ್ರ ಸರ್ಕಾರವು ಉಚಿತ ಲಸಿಕೆ ವಿತರಣಾಯೋಜನೆ ಆರಂಭಿಸಿತು. ಈಗಲೂ ಅದು ಮುಂದುವರಿದಿದೆ. ಇಂದಿನವರೆಗೆ88 ಕೋಟಿ ಡೋಸ್‌ನಷ್ಟು ಲಸಿಕೆ ವಿತರಿಸಲಾಗಿದೆʼ ಎಂದಿದ್ದಾರೆ.

ಇತ್ತೀಚೆಗೆ ಚಾಲನೆ ಪಡೆದಿರುವ ʼಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ʼ ಆರೋಗ್ಯ ಸೇವೆಯನ್ನುದೇಶದ ಮೂಲೆಮೂಲೆಗೆ ವಿಸ್ತರಿಸಲು ಸಹಕಾರಿಯಾಗಲಿದೆ ಎಂದೂ ಇದೇ ವೇಳೆ ಹೇಳಿದ್ದಾರೆ.

ಕೇಂದ್ರ ಸಚಿವ ಮನಸುಖ್ ಮಾಂಡವೀಯ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಮತ್ತು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT