ಜೈಪುರ: ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಹಾಗೂ ರಾಜಕೀಯ ಪ್ರವೇಶಿಸುವುದಿಲ್ಲ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಸ್ಪಷ್ಟಪಡಿಸಿದ್ದಾರೆ.

ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ರೈತ ಸಂಘಟನೆಗಳು ರಾಜಕೀಯ ರಂಗ ರಚಿಸುತ್ತಿವೆ ಎಂಬ ವರದಿಗಳ ಬೆನ್ನಲ್ಲೇ ಅವರು ಈ ಸ್ಪಷ್ಟನೆ ನೀಡಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಕುರಿತ ನಿಲುವೇನು ಎಂಬ ಪ್ರಶ್ನೆಗೆ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಆ ಬಗ್ಗೆ ಮಾತನಾಡಲಿದ್ದೇನೆ ಎಂದು ಹೇಳಿದ್ದಾರೆ. ಆದಾಗ್ಯೂ ರೈತರು ಕಿಂಗ್ ಮೇಕರ್‌ಗಳಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಲಖಿಂಪುರ ಖೇರಿ ಪ್ರಕರಣದ ಬಗ್ಗೆ ಸರ್ಕಾರ ಮೃದು ಧೋರಣೆ ತಳೆದಿದೆ ಎಂದು ಟಿಕಾಯತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.