ಬುಧವಾರ, ಡಿಸೆಂಬರ್ 8, 2021
23 °C
ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ

ವಿದ್ಯಾರ್ಥಿನಿಯರಿಗೆ ಉಚಿತ ಸ್ಮಾರ್ಟ್‌ಫೋನ್, ಸ್ಕೂಟಿ: ಪ್ರಿಯಾಂಕಾ ಗಾಂಧಿ ಭರವಸೆ

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, 12ನೇ ತರಗತಿ ಉತ್ತೀರ್ಣರಾದ ಬಾಲಕಿ ಯರಿಗೆ ಉಚಿತವಾಗಿ ಸ್ಮಾರ್ಟ್‌ ಫೋನ್ ಹಾಗೂ ಪದವೀಧರ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ ಕೊಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಅವರು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೇ 40ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಲಿದೆ ಎಂದು ಹೇಳಿದ್ದರು.

‘ನಾನು ಕೆಲವು ವಿದ್ಯಾರ್ಥಿನಿಯರನ್ನು ಬುಧವಾರ ಭೇಟಿಯಾದೆ. ಅವರು ತಮ್ಮ ಅಧ್ಯಯನಕ್ಕೆ ಮತ್ತು ಭದ್ರತೆಯ ದೃಷ್ಟಿಯಿಂದ ಸ್ಮಾರ್ಟ್ ಫೋನ್ ಬೇಕು ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕ, ಚುನಾವಣಾ ಪ್ರಣಾಳಿಕೆ ಸಮಿತಿಯ ಒಪ್ಪಿಗೆ ಮೇರೆಗೆ ಪಕ್ಷ ಅಧಿಕಾರಕ್ಕೆ ಬಂದರೆ, 12ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಉಚಿತ ಸ್ಮಾರ್ಟ್‌ ಫೋನ್‌ ಮತ್ತು ಪದವೀಧರ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್‌ ಸ್ಕೂಟಿಗಳನ್ನು ನೀಡಲು ನಿರ್ಧರಿಸಿದೆ. ಇದು ನನಗೆ ತುಂಬಾ ಸಂತೋಷ ತಂದಿದೆ‘ ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪಕ್ಷದ ಉಸ್ತುವಾರಿಯೂ ಆಗಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಈ ಟ್ವೀಟ್‌ನೊಂದಿಗೆ ಶಾಲಾ/ಕಾಲೇಜು ವಿದ್ಯಾರ್ಥಿನಿಯರ ಗುಂಪುಗಳು ಮತ್ತು ಮಾಧ್ಯಮದವರೊಂದಿಗೆ ಸಂವಹನ ನಡೆಸುತ್ತಿರುವ ವಿಡಿಯೊವನ್ನು ಲಗತ್ತಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು