ಭಾನುವಾರ, ಅಕ್ಟೋಬರ್ 25, 2020
28 °C

ರಾಹುಲ್ ಗಾಂಧಿ ಹಾಥರಸ್ ಭೇಟಿ ರಾಜಕೀಯ ಪ್ರೇರಿತ: ಸ್ಮೃತಿ ಇರಾನಿ ಟೀಕೆ

ಎಎನ್‌ಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹಾಥರಸ್ ಭೇಟಿ ರಾಜಕೀಯ ಪ್ರೇರಿತ. ಸಂತ್ರಸ್ತೆಯ ಕುಟುಂಬದವರಿಗೆ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ಕೂಡಿದ್ದಲ್ಲ’ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ನ ತಂತ್ರಗಳ ಬಗ್ಗೆ ಜನರಿಗೆ ತಿಳಿದಿದೆ. ಅದಕ್ಕಾಗಿಯೇ 2019ರಲ್ಲಿ ಬಿಜೆಪಿಗೆ ಐತಿಹಾಸಿಕ ಜಯ ಒದಗಿಸಿಕೊಟ್ಟಿದ್ದಾರೆ. ಅವರು (ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ) ಹಾಥರಸ್‌ಗೆ ಭೇಟಿ ನೀಡಿರುವುದು ರಾಜಕೀಯಕ್ಕಷ್ಟೇ ವಿನಃ ಸಂತ್ರಸ್ತೆಗೆ ನ್ಯಾಯ ಒದಗಿಸುವುದಕ್ಕಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: 

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಗುರುವಾರ ಹಾಥರಸ್‌ಗೆ ತೆರಳಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಮುಂದಾಗಿದ್ದರು. ಅವರನ್ನು ಉತ್ತರ ಪ್ರದೇಶ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆದಿದ್ದರು. ರಾಹುಲ್, ಪ್ರಿಯಾಂಕಾ ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು. ಕೊರೊನಾ ವೈರಸ್ ಸಾಂಕ್ರಾಮಿಕದ ಸಂದರ್ಭ ಸಾರ್ವಜನಿಕರ ಓಡಾಟಕ್ಕಿರುವ ನಿರ್ಬಂಧ ಉಲ್ಲಂಘಿಸಿದ್ದಕ್ಕಾಗಿ ಅವರನ್ನು ವಶಕ್ಕೆ ಪಡೆಯಲಾಗಿತ್ತು.

ಹಾಥರಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯು ಸೆಪ್ಟೆಂಬರ್ 29ರಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು