ನವದೆಹಲಿ:ಕೇರಳದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸರಕು ಇಡುವ ಜಾಗದಲ್ಲಿ ಶನಿವಾರ ಹಾವೊಂದು ಪತ್ತೆಯಾಗಿದ್ದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಬಿ737–800 ವಿಮಾನವು ದುಬೈ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆಯೇ ಹಾವು ಇರುವುದು ತಿಳಿದುಬಂದಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗೆ ಇಳಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.