ಶನಿವಾರ, ಮೇ 21, 2022
23 °C

ಮೂಲಸೌಕರ್ಯ ನಿಗಮ ಪ್ರಸ್ತಾವಕ್ಕೆ ಸ್ಪಂದಿಸದ ಕೇಂದ್ರ: ನ್ಯಾಯಮೂರ್ತಿ ರಮಣ ಅತೃಪ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

ವರಂಗಲ್‌: ನ್ಯಾಯಾಂಗ ಮೂಲಸೌಕರ್ಯ ನಿಗಮ ಸ್ಥಾಪನೆ, ಕೋವಿಡ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಜೀವನೋಪಾಯ ಕಳೆದುಕೊಂಡ ವಕೀಲರ ಕುಟುಂಬದವರಿಗೆ ಆರ್ಥಿಕ ನೆರವು ಮುಂತಾದ ವಿಷಯಗಳಿಗೆ ಕೇಂದ್ರ ಸರ್ಕಾರವು ಇನ್ನಷ್ಟೇ ಸ್ಪಂದಿಸಬೇಕಿದೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಭಾನುವಾರ ಹೇಳಿದ್ದಾರೆ. ವರಂಗಲ್‌ನಲ್ಲಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. 

ನ್ಯಾಯಾಂಗ ಮೂಲಸೌಕರ್ಯ ನಿಗಮ ಸ್ಥಾಪನೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್‌ ಇಂಟರ್‌ನೆಟ್‌ ಸೌಲಭ್ಯ ನೀಡಿಕೆಯ ಪ್ರಸ್ತಾವವನ್ನು ಕ್ರಮವಾಗಿ ಜುಲೈ ಮತ್ತು ಜೂನ್‌ನಲ್ಲಿ ಸಲ್ಲಿಸಲಾಗಿತ್ತು. ಆದರೆ, ಈವರೆಗೆ ಯಾವ ಕ್ರಮವೂ ಆಗಿಲ್ಲ. ನಿಗಮ ಸ್ಥಾಪನೆಗೆ ಅಗತ್ಯವಾದ ಮಸೂದೆಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೇ ಸರ್ಕಾರವು ಮಂಡಿಸುವ ವಿಶ್ವಾಸ ಇದೆ ಎಂದು ಅವರು ಹೇಳಿದ್ದಾರೆ. 

‘ಕೋವಿಡ್‌ ನಿಂದಾಗಿ ಜೀವನೋಪಾಯ ಕಳೆದುಕೊಂಡ ವಕೀಲರ ಕುಟುಂಬಗಳಿಗೆ ನೆರವಾಗಬೇಕು ಎಂದು ಸರ್ಕಾರವನ್ನು ಕೋರಿದ್ದೆ. ಈ ಕೋರಿಕೆಗೆ ಈ ವರೆಗೆ ಯಾವ ಪ್ರತಿಕ್ರಿಯೆಯೂ ಬಂದಿಲ್ಲ. ಪ್ರಧಾನಿ ಮತ್ತು ರಾಷ್ಟ್ರಪತಿ ಇದ್ದ ಎಲ್ಲ ವೇದಿಕೆಗಳಲ್ಲಿಯೂ ಅವಕಾಶ ಸಿಕ್ಕಾಗಲೆಲ್ಲ ಈ ವಿಚಾರಗಳನ್ನು ನಾನು ಪ್ರಸ್ತಾಪಿಸಿದ್ದೇನೆ’ ಎಂದು ತಮ್ಮ ಅಸಮಾಧಾನವನ್ನು ರಮಣ ಹೊರ ಹಾಕಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು