ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ವ್ಯಾಪ್ತಿಯಲ್ಲಿ ಮಂಗಳವಾರ ಸಂಭವಿಸಿದ ಹಿಮಕುಸಿತದಲ್ಲಿ ಯೋಧರೊಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

‘ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಹಿಮ ಕುಸಿತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸೈನಿಕರು ಕೊಚ್ಚಿ ಹೋಗಿದ್ದರು. ಅವರನ್ನು ತಕ್ಷಣವೇ ರಕ್ಷಿಸಿ, ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ನಿಖಿಲ್ ಶರ್ಮಾ ಎಂಬುವವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಯೋಧರಾದ ರಮೇಶ್ ಚಂದ್ ಮತ್ತು ಗುರ್ವಿಂದರ್ ಸಿಂಗ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕುಪ್ವಾರ, ಬಂಡಿಪೊರ, ಬಾರಾಮುಲ್ಲಾ ಮತ್ತು ಗಂಡೇರ್ಬಲ್‌ನಲ್ಲಿ ಸೋಮವಾರ ಹಿಮಾಪಾತ ಸಂಭವಿಸುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.