ಮಂಗಳವಾರ, ಮಾರ್ಚ್ 21, 2023
23 °C

ಜಮ್ಮು ಮತ್ತು ಕಾಶ್ಮೀರ ‌| ಗಡಿಯಲ್ಲಿ ನೆಲಬಾಂಬ್‌ ಸ್ಫೋಟ: ಯೋಧನಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಶನಿವಾರ ನೆಲಬಾಂಬ್ ಸ್ಫೋಟಗೊಂಡಿದೆ. 

ಕೆರ್ನಿ ಸೆಕ್ಟರ್‌ನಲ್ಲಿ ಸೈನಿಕರ ಗುಂಪು ಬೆಳಿಗ್ಗೆ ಗಸ್ತು ತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ವೇಳೆ ಲ್ಯಾನ್ಸ್ ನಾಯಕ್ ಅನ್ಶುಲ್ ರಾವತ್ ಎಂಬ ಯೋಧ ಗಾಯಗೊಂಡಿದ್ದಾರೆ. ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಉಧಮ್‌ಪುರದಲ್ಲಿರುವ  ಸೇನಾ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಗಡಿಯಲ್ಲಿ ಒಳನುಸುಳುವಿಕೆ ತಡೆಯುವ ಭಾಗವಾಗಿ, ಕೆಲವು ಪ್ರದೇಶಗಳಲ್ಲಿ ನೆಲಬಾಂಬ್‌ಗಳನ್ನು ಅಳವಡಿಸಲಾಗುವುದು.  ಕೆಲವೊಮ್ಮೆ ಈ ನೆಲೆಬಾಂಬ್‌ಗಳು ಮಳೆ ಕಾರಣ ನೀರಿನಲ್ಲಿ ಕೊಚ್ಚಿ ಹೋಗಿರುತ್ತದೆ. ಇದು ಈ ರೀತಿಯ ಅವಘಡಗಳಿಗೆ ಕಾರಣವಾಗುತ್ತದೆ ಎಂದೂ ಅಧಿಕಾರಿಗಳು  ತಿಳಿಸಿದ್ದಾರೆ.

ಇದನ್ನು ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು