ಬುಧವಾರ, ಡಿಸೆಂಬರ್ 2, 2020
25 °C
ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಘಟನೆ

ಪಾಕ್‌ ಗುಂಡಿನ ದಾಳಿಗೆ ಭಾರತೀಯ ಯೋಧ ಬಲಿ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು: ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸಮೀಪ ಶನಿವಾರ ಬೆಳಿಗ್ಗೆ ಪಾಕಿಸ್ತಾನದ ರಕ್ಷಣಾ ಪಡೆಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ರಕ್ಷಣಾಪಡೆಯ ಯೋಧರೊಬ್ಬರು ಸಾವನ್ನಪ್ಪಿದ್ದಾರೆ.

ನೌಶೇರಾ ಸೆಕ್ಟರ್‌ನಲ್ಲಿ ಲ್ಯಾಮ್‌ ಪ್ರದೇಶದಲ್ಲಿರುವ ಗಡಿಯುದ್ದಕ್ಕೂ ಪಾಕಿಸ್ತಾನ ಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿತು. ಘಟನೆಯಲ್ಲಿ ಹವಲ್ದಾರ್ ಒಬ್ಬರು ತೀವ್ರವಾಗಿ ಗಾಯಗೊಂಡು, ನಂತರ ಸಾವನ್ನಪ್ಪಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಕಿಸ್ತಾನದ ಈ ದಾಳಿಗೆ ಭಾರತೀಯ ಸೇನೆಯು ತೀವ್ರವಾಗಿ ಪ್ರತೀಕಾರ ತೀರಿಸಿತು. ಎರಡೂ ದೇಶಗಳ ನಡುವೆ ಸ್ವಲ್ಪ ಸಮಯದವರೆಗೆ ಗಡಿಯಾಚೆಗೆ ಗುಂಡಿನ ದಾಳಿ ಮುಂದುವರೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು