ಸೋಮವಾರ, ಮೇ 16, 2022
24 °C

ಪಾಕ್‌ ಸೇನೆಯಿಂದ ಅಪ್ರಚೋದಿತ ದಾಳಿ; ಸೈನಿಕ ಹುತಾತ್ಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಪಾಕಿಸ್ತಾನ ಸೇನೆಯು ಬುಧವಾರ ನಡೆಸಿದ ಗುಂಡಿನ ದಾಳಿಯಲ್ಲಿ ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ವಕ್ತಾರ ತಿಳಿಸಿದರು.

ರಾಜಸ್ಥಾನದ ಜೋಧ್‌ಪುರನ ನಿವಾಸಿ ಸಿಪಾಯಿ ಲಕ್ಷ್ಮಣ್‌ ಅವರು ಮೃತಪಟ್ಟಿದ್ದಾರೆ. ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಿಂದಾಗಿ ಈ ವರ್ಷ ಒಟ್ಟು ನಾಲ್ವರು ಸೈನಿಕರು ಸಾವಿಗೀಡಾಗಿದ್ದಾರೆ.

‘ಸುಂದರ್‌ಬನಿಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಈ ದಾಳಿ ವೇಳೆ ಲಕ್ಷ್ಮಣ್‌ ಗಂಭೀರವಾಗಿ ಗಾಯಗೊಂಡಿದ್ದರು’ ಎಂದು ವಕ್ತಾರರು ಮಾಹಿತಿ ನೀಡಿದರು.

‘ಸಿಪಾಯಿ ಲಕ್ಷ್ಮಣ್‌ ಅವರು ಧೈರ್ಯಶಾಲಿ ಮತ್ತು ಪ್ರಾಮಾಣಿಕ ಸೈನಿಕರಾಗಿದ್ದರು. ಅವರ ತ್ಯಾಗಕ್ಕೆ ದೇಶ ಸದಾ ಋಣಿಯಾಗಿದೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು