ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಹಗರಣದಲ್ಲಿ ಕೆಲ ಬಿಜೆಪಿ ನಾಯಕರು ಷಾಮೀಲು: ಮಮತಾ ಆರೋಪ

ಕೇಂದ್ರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ಹೋರಾಟ ನಿಲ್ಲದು–ಪಶ್ಚಿಮ ಬಂಗಾಳ ಸಿ.ಎಂ
Last Updated 28 ಆಗಸ್ಟ್ 2021, 13:49 IST
ಅಕ್ಷರ ಗಾತ್ರ

ಕೋಲ್ಕತ್ತ: ‘ಕಲ್ಲಿದ್ದಲ್ಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ತಮ್ಮ ಸೋದರಳಿಯ, ಸಂಸದ ಅಭಿಷೇಕ್‌ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿರುವ’ ಕ್ರಮವನ್ನು ಟೀಕಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಕೆಲ ಸಚಿವರು ಈ ಹಗರಣದಲ್ಲಿ ಕೈಜೋಡಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ನೀವು (ಬಿಜೆಪಿ) ನಮಗೆ ಇ.ಡಿ ತೋರಿಸಿದರೆ, ನಾವು ಬಿಜೆಪಿ ನಾಯಕರ ವಿರುದ್ಧ ಪುರಾವೆಗಳನ್ನು ಸಹ ಇ.ಡಿಗೆ ಕಳುಹಿಸುತ್ತೇವೆ. ಬಿಜೆಪಿ ಕೆಲ ಸಚಿವರು ಮತ್ತು ನಾಯಕರು ಕಲ್ಲಿದ್ದಲು ಮಾಫಿಯಾದೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ ಅವರು ನಡೆಸುತ್ತಿದ್ದ ಹೋಟೆಲ್‌ಗಳಲ್ಲಿ ಅವರು ಉಳಿದುಕೊಂಡಿದ್ದರು’ ಎಂದೂ ಅವರು ದೂರಿದ್ದಾರೆ.

‘ನರೇಂದ್ರ ಮೋದಿ ಸರ್ಕಾರವು ದೇಶದ ಒಕ್ಕೂಟ ರಚನೆಯನ್ನು ನೆಲಸಮ ಮಾಡಲು ಮತ್ತು ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ. ಕೇಂದ್ರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ಹೋರಾಡಲು ಎಲ್ಲಾ ಮುಖ್ಯಮಂತ್ರಿಗಳ ಸಭೆಯನ್ನು ಕರೆಯಲಾಗುವುದು’ ಎಂದು ಮಮತಾ ಹೇಳಿದರು.

‘ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲಾಗಿದೆ. ಈಗ ಅವರು ನಮ್ಮ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಮತ್ತು ಇತರರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದ್ದಾರೆ. ಆದರೆ, ನಾವು ಬೆದರಿಕೆಯ ತಂತ್ರಗಳಿಗೆ ಬಗ್ಗುವುದಿಲ್ಲ. ಹೋರಾಟ ಮುಂದುವರಿಸುತ್ತೇವೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT