ಕೋಲ್ಕತ್ತ: ಕೋಲ್ಕತ್ತದ ಮೇಯೊ ರಸ್ತೆಯಲ್ಲಿ ಶನಿವಾರ ಸಂಜೆ ಬಸ್ಸು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 17 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬಸ್ ಚಾಲಕ ಮತ್ತು ಒಬ್ಬ ಪ್ರಯಾಣಿಕ ಮೃತಪಟ್ಟಿದ್ದಾರೆ.
ಮೆಟಿಯಾಬ್ರೂಜ್ಹೌ ಮಾರ್ಗವಾಗಿ ಬರುತ್ತಿದ್ದ ಬಸ್, ಮೇಯೊ-ಡಫರಿನ್ ರಸ್ತೆ ಕ್ರಾಸಿಂಗ್‌ನಲ್ಲಿ ಸಂಜೆ 4.40ರ ಸುಮಾರಿನಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಗಾಯಗೊಂಡವರನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.