ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಪ್ರಚಾರ, ಟ್ವಿಟರ್ ಪ್ರೊಫೈಲ್‌ನಲ್ಲಿ ಬದಲಾವಣೆ ಆಗಿಲ್ಲ: ಗುಲಾಂ ನಬಿ ಆಜಾದ್

Last Updated 26 ಜನವರಿ 2022, 2:42 IST
ಅಕ್ಷರ ಗಾತ್ರ

ನವದೆಹಲಿ: ಟ್ವಿಟರ್ 'ಬಯೋ' ಬದಲಾಯಿಸಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿರುವ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಗೊಂದಲ ಸೃಷ್ಟಿ ಮಾಡಲು ಕೆಲವು ಮಂದಿ ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

'ಗೊಂದಲ ಸೃಷ್ಟಿಸಲು ಕೆಲವು ಮಂದಿ ಅಪಪ್ರಚಾರ ಮಾಡುತ್ತಿದ್ದಾರೆ. ನನ್ನ ಟ್ವಿಟರ್ ಪ್ರೊಫೈಲ್‌ನಿಂದ ಏನನ್ನೂ ತೆಗೆದು ಹಾಕಿಲ್ಲ ಅಥವಾ ಸೇರಿಸಿಲ್ಲ. ನನ್ನ ಟ್ವಿಟರ್ ಪ್ರೊಫೈಲ್ ಮೊದಲಿನಂತೆಯೇ ಇದೆ' ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವದ ಮುನ್ನಾದಿನ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣಕ್ಕೆ ಗುಲಾಂ ನಬಿ ಆಜಾದ್ ಆಯ್ಕೆಯಾಗಿದ್ದರು.

ಪದ್ಮಶ್ರೀ ಪ್ರಶಸ್ತಿ ಪಟ್ಟಿಯಲ್ಲಿ ಆಜಾದ್‌ ಹೆಸರು ಕಾಣಿಸಿಕೊಂಡಿರುವುದು ಕಾಂಗ್ರೆಸ್ ವಲಯದಲ್ಲೇ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ. ಕೆಲವು ನಾಯಕರು ಪ್ರಶಸ್ತಿ ನಿರಾಕರಿಸುವಂತೆ ಬೇಡಿಕೆ ಮುಂದಿರಿಸಿದ್ದಾರೆ.

ಈಗಾಗಲೇ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ ಪ್ರಶಸ್ತಿ ನಿರಾಕರಿಸಿದ್ದಾರೆ.

ಈ ಹಿಂದೆ ಆಜಾದ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ವ್ಯಾಪಕ ಸುಧಾರಣೆಗಳನ್ನು ಬಯಸಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದರು. ಇದು ಕೂಡ ಪಕ್ಷದಲ್ಲಿ ಅತೃಪ್ತಿಗೆ ಕಾರಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT