ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಲಯದ ಸಮಯ ಉಳಿಸಲು ಚೌಕಟ್ಟಿನ ಆಚೆಗಿನ ಚಿಂತನೆ ಅಗತ್ಯ: ಸುಪ್ರೀಂ ಕೋರ್ಟ್‌

ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ನ್ಯಾಯಪೀಠ ಅಭಿಮತ
Last Updated 21 ಮಾರ್ಚ್ 2023, 16:12 IST
ಅಕ್ಷರ ಗಾತ್ರ

ನವದೆಹಲಿ: ‘ನ್ಯಾಯಾಲಯದ ಅಮೂಲ್ಯ ಸಮಯ ಉಳಿಸಲು ಹಾಗೂ ನ್ಯಾಯಾಂಗ ವ್ಯವಸ್ಥೆಯಲ್ಲಿನ ಅಸ್ತವ್ಯಸ್ತತೆಯನ್ನು ತೊಡೆದುಹಾಕಲು ಚೌಕಟ್ಟಿನಾಚೆಗಿನ ಚಿಂತನೆ ಅಗತ್ಯ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಅಭಿಪ್ರಾಯಪಟ್ಟಿದೆ.‌

ಜಾಮೀನು ಅರ್ಜಿಗಳನ್ನು ಪರಿಗಣಿಸುವಾಗ ಪಾಲಿಸಬೇಕಿರುವ ಮಾರ್ಗಸೂಚಿಗಳ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಕೆ.ಕೌಲ್‌ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ, ‘ಪ್ರಕರಣವೊಂದರಲ್ಲಿ ಬಂಧಿತನಾಗಿ ಸುದೀರ್ಘ ಅವಧಿವರೆಗೆ ಜೈಲಿನಲ್ಲಿರುವ ಅಥವಾ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಅಪರಾಧಿಗಳನ್ನು ಸನ್ನಡತೆ ಇಲ್ಲವೇ ಶಿಕ್ಷೆಯ ಅವಧಿ ಪೂರ್ಣಗೊಳಿಸಿರುವ ಮಾನದಂಡದ ಆಧಾರದಲ್ಲಿ ಬಿಡುಗಡೆಗೊಳಿಸಲು ಇರುವ ಮಾರ್ಗೋಪಾಯಗಳ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಈ ಹಿಂದೆ ಸೂಚಿಸಲಾಗಿತ್ತು. ಈ ವಿಚಾರವಾಗಿ ಏನಾದರೂ ಚರ್ಚೆಗಳು ನಡೆದಿವೆಯೇ? ಏನಾದರೂ ಬೆಳವಣಿಗೆ ಆಗಿದೆಯೇ’ ಎಂದು ಹೆಚ್ಚುವರಿ ಸಾಲಿಸಿಟರ್‌ ಜನರಲ್ ಕೆ.ಎಂ.ನಟರಾಜ್‌ ಅವರನ್ನು ಪ್ರಶ್ನಿಸಿತು.

‘ಸುಪ್ರೀಂ ಕೋರ್ಟ್‌ನ ಆದೇಶದ ಬಳಿಕ ಈ ಕುರಿತು ಚ‌ರ್ಚಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹಲವು ಸುತ್ತೋಲೆಗಳನ್ನೂ ಹೊರಡಿಸಿದೆ’ ಎಂದು ನಟರಾಜ್ ಅವರು ನ್ಯಾಯಮೂರ್ತಿ ಎ.ಅಮನ್‌ಉಲ್ಲಾ ಮತ್ತು ಅರವಿಂದ ಕುಮಾರ್‌ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT