ಬುಧವಾರ, ಏಪ್ರಿಲ್ 21, 2021
23 °C

ಕೆಲವರಿಂದ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಯತ್ನ; ಪ್ರಧಾನಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೆಲವು ಜನರು ತಮ್ಮ 'ರಾಜಕೀಯ ಹಿತಾಸಕ್ತಿಗಳಿಂದ' ಭಾರತದ ಸಾಂವಿಧಾನಿಕ ಸಂಸ್ಥೆಗಳ ಪ್ರತಿಷ್ಠೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆ ತರಲು ಯಾವಾಗಲೂ ಪ್ರಯತ್ನಿಸುತ್ತಾರೆ. ಅವರು ದೇಶದ ಮುಖ್ಯವಾಹಿನಿಯನ್ನು ಪ್ರತಿನಿಧಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಿಳಿಸಿದರು.

ಗೀತೆಯ 'ಶ್ಲೋಕ'ಗಳ ಕುರಿತು 21 ವಿದ್ವಾಂಸರು ವ್ಯಾಖ್ಯಾನಗಳೊಂದಿಗೆ ಹಸ್ತಪ್ರತಿಯನ್ನು ಬಿಡುಗಡೆ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ರಿಯೆಯ ಸ್ವಾತಂತ್ರ್ಯ ಮತ್ತು ಮಹಾಕಾವ್ಯವು ಪ್ರತಿಪಾದಿಸಿದ ಆಲೋಚನೆಗಳು ಭಾರತೀಯ ಪ್ರಜಾಪ್ರಭುತ್ವವನ್ನು ಪ್ರತ್ಯೇಕಿಸುತ್ತದೆ, ಇದು ಜನರಿಗೆ ಸಮಾನ ಹಕ್ಕುಗಳನ್ನು ನೀಡುತ್ತದೆ ಎಂದು ಅವರು ಹೇಳಿದರು.

ಸಂವಿಧಾನವನ್ನು ರಕ್ಷಿಸುವ ಪ್ರಜಾಪ್ರಭುತ್ವ ಸಂಸ್ಥೆಗಳಿಂದ ಜನರು ಈ ಸ್ವಾತಂತ್ರ್ಯವನ್ನು ಸೆಳೆಯುತ್ತಾರೆ ಮತ್ತು ಅದಕ್ಕಾಗಿಯೇ ನಮ್ಮ ಹಕ್ಕುಗಳ ಬಗ್ಗೆ ಮಾತನಾಡುವಾಗ ನಮ್ಮ ಕರ್ತವ್ಯಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಅವಶ್ಯಕವಾಗಿದೆ ಎಂದು ಪ್ರತಿಪಕ್ಷಗಳ ಹೆಸರೇಳದೆಯೇ ಮೋದಿ ಟೀಕಿಸಿದರು.

ಇಂದು ಕೆಲವರು ಯಾವಾಗಲೂ ಸಾಂವಿಧಾನಿಕ ಸಂಸ್ಥೆಗಳ ಪ್ರತಿಷ್ಠೆ ಮತ್ತು ವಿಶ್ವಾಸಾರ್ಹತೆಯನ್ನು ಹೇಗೆ ಗುರಿಯಾಗಿಸಿಕೊಳ್ಳುವ ಬಗ್ಗೆ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ. ನಮ್ಮ ಸಂಸತ್ತು, ನ್ಯಾಯಾಂಗ ಅಥವಾ ಸೇನೆಯೇ ಆಗಿರಲಿ, ರಾಜಕೀಯ ಹಿತಾಸಕ್ತಿಗಳಿಂದಾಗಿ ಅವುಗಳನ್ನು ಗುರಿಯಾಗಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಪ್ರವೃತ್ತಿ ದೇಶಕ್ಕೆ ಸಾಕಷ್ಟು ಹಾನಿ ಮಾಡುತ್ತದೆ ಎಂದು ಹೇಳಿದರು.

'ಈ ಜನರು ದೇಶದ ಮುಖ್ಯವಾಹಿನಿಯನ್ನು ಪ್ರತಿನಿಧಿಸುವುದಿಲ್ಲ ಎಂಬುದು ತೃಪ್ತಿಕರ ವಿಷಯವಾಗಿದೆ'. ತನ್ನ ಕರ್ತವ್ಯಗಳೆಡೆಗೆ ಗಮನ ಕೇಂದ್ರೀಕರಿಸುವಾಗ ದೇಶವು ಈಗ ಮುಂದೆ ಸಾಗುತ್ತಿದೆ. ಗೀತೆಯು ಪ್ರತಿಪಾದಿಸಿದ 'ಕರ್ಮಯೋಗ' ವನ್ನು ದೇಶವು ತನ್ನ ಮಂತ್ರವನ್ನಾಗಿ ಮಾಡಿಕೊಂಡಿದೆ ಮತ್ತು ಅದು ಬಡವರು, ರೈತರು, ಕಾರ್ಮಿಕರು, ದಲಿತರು ಮತ್ತು ಹಿಂದುಳಿದವರ ಜೀವನವನ್ನು ಬದಲಾಯಿಸಲು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಈ ಸನ್ನಿವೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಭಾರತವು ಹಲವಾರು ದೇಶಗಳಿಗೆ ಔಷಧಿಗಳನ್ನು ಕಳುಹಿಸುವ ಮೂಲಕ ಮತ್ತು ಈಗ ಯಾವುದೇ ಷರತ್ತುಗಳಿಲ್ಲದೆ ಲಸಿಕೆಗಳನ್ನು ಕಳುಹಿಸುವ ಮೂಲಕ ನೀಡಿದ ಸಹಾಯದ ಬಗ್ಗೆ ಪ್ರಧಾನಿ ಮಾತನಾಡಿದರು ಮತ್ತು ಅದಕ್ಕೆ ಗೀತೆಯೇ ಸ್ಫೂರ್ತಿ ಎಂದ ಅವರು, ಮಹಾಕಾವ್ಯವು ಮಾನವಕುಲಕ್ಕೆ ನಿಸ್ವಾರ್ಥ ಸೇವೆ ಮಾಡುವುದನ್ನು ಕಲಿಸಿದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು