ಶನಿವಾರ, ಜೂನ್ 25, 2022
25 °C

ರಾಜೀವ್ ಗಾಂಧಿ ಪುಣ್ಯತಿಥಿ: ಸೋನಿಯಾ ಗಾಂಧಿ, ಪ್ರಿಯಾಂಕಾ ಸೇರಿ ಗಣ್ಯರಿಂದ ನಮನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 31ನೇ ಪುಣ್ಯತಿಥಿ. ಈ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ’ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

‌ಸೋನಿಯಾ ಅವರ ಜೊತೆಯಲ್ಲಿ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ, ಅಳಿಯ ರಾಬರ್ಟ್ ವಾದ್ರಾ ಅವರು ಉಪಸ್ಥಿತರಿದ್ದರು.

ಕಾಂಗ್ರೆಸ್ ನಾಯಕರಾದ ಪಿ. ಚಿದಂಬರಂ, ಸಚಿನ್ ಪೈಲೆಟ್ ಸೇರಿದಂತೆ ಅನೇಕ ಸ್ಮಾರಕಕ್ಕೆ ಭೇಟಿ ಪುಷ್ಪ ನಮನ ಸಲ್ಲಿಸಿದ್ದಾರೆ. 

ಓದಿ... ದೇಶದ ಎಲ್ಲ ಭಾಷೆಗಳು ಪೂಜನೀಯ: ಪ್ರಧಾನಿ ಮೋದಿ ಮಾತಿಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ರಾಜೀವ್‌ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದ ಪ್ರಧಾನಿಯಾಗಿ ರಾಜೀವ್‌ ಗಾಂಧಿ ಅಧಿಕಾರ ವಹಿಸಿಕೊಂಡರು.  1984 ರಿಂದ 1989 ರವರೆಗೆ ಪ್ರಧಾನಿಯಾಗಿದ್ದರು.  ಅತ್ಯಂತ ಕಿರಿಯ ವಯಸ್ಸಿಗೆ ಪ್ರಧಾನಿಯಾಗಿದ್ದರು. 1991ರ ಮೇ 21ರಂದು ರಾಜೀವ್‌ ಗಾಂಧಿ ಹತ್ಯೆಗೀಡಾದರು.

ಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ಅಪರಾಧಿ ಎ.ಜಿ.ಪೇರರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬುಧವಾರ ಬಿಡುಗಡೆ ಮಾಡಲಾಗಿದೆ. 

ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಮಂದಿ ಅಪರಾಧಿಗಳಲ್ಲಿ ಪೇರರಿವಾಳನ್‌ ಒಬ್ಬರಾಗಿದ್ದು, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಡಿ ಎ.ಜಿ ಪೇರರಿವಾಳನ್‌ ಅವರನ್ನು 1991ರ ಜೂನ್‌ 19ರಂದು ಬಂಧಿಸಲಾಗಿತ್ತು. 

ಓದಿ...

 ರಾಜೀವ್ ಗಾಂಧಿ ಹತ್ಯೆ ಅಪರಾಧಿ ಬಿಡುಗಡೆ: 31 ವರ್ಷಗಳ ಜೈಲುವಾಸ ಶಿಕ್ಷೆ ಬಳಿಕ ಮುಕ್ತ 

ರಾಜೀವ್ ಗಾಂಧಿ ಹತ್ಯೆ ಅಪರಾಧಿ ಬಿಡುಗಡೆ: ಸಿಎಂ ಸ್ಟಾಲಿನ್ ಭೇಟಿಯಾದ ಪೇರರಿವಾಳನ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು