ಸೋಮವಾರ, ನವೆಂಬರ್ 30, 2020
20 °C

ಬಿಹಾರ ಚುನಾವಣೆ: ಇಬ್ಬರು ವೀಕ್ಷಕರ ನೇಮಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ಎಎನ್‌ಐ‌ Updated:

ಅಕ್ಷರ ಗಾತ್ರ : | |

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ಕಾಂಗ್ರೆಸ್‌ನಿಂದ ರಂದೀಪ್ ಸಿಂಗ್ ಸುರ್ಜೆವಾಲಾ ಮತ್ತು ಅವಿನಾಶ್ ಪಾಂಡೆ ಅವರನ್ನು ಬಿಹಾರದಲ್ಲಿ ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನ ಕಾರ್ಯದರ್ಶಿಗಳಾದ ರಂದೀಪ್ ಸಿಂಗ್ ಸುರ್ಜೆವಾಲಾ ಮತ್ತು ಅವಿನಾಶ್ ಪಾಂಡೆ ಅವರನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶಿಸಿದ್ದಾರೆ. ಇಬ್ಬರು ಇಂದು ಬಿಹಾರದ ರಾಜಧಾನಿ ಪಟ್ನಾಕ್ಕೆ ಆಗಮಿಸಲಿದ್ದಾರೆ.

ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಉಭಯ ನಾಯಕರು ಕೇಂದ್ರ ನಾಯಕತ್ವದೊಂದಿಗೆ ಚರ್ಚೆ ಮತ್ತು ಚುನಾವಣಾ ಫಲಿತಾಂಶದ ನಂತರದ ರಾಜಕೀಯ ಕಾರ್ಯ ಚಟುವಟಿಕೆಗಳ ಬಗ್ಗೆ ನಿರ್ಧರಿಸಲಿದ್ದಾರೆ. ಸರ್ಕಾರ ರಚನೆ ಮತ್ತು ಇತರೆ ರಾಜಕೀಯ ಬೆಳವಣಿಗೆಗಳ ಕುರಿತು ಕೇಂದ್ರ ನಾಯಕರಿಗೆ ನಿರಂತರ ವರದಿ ನೀಡಲಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೊನೆಯ ಸುತ್ತಿನ ಮತದಾನ ಶನಿವಾರ ಮುಕ್ತಾಯಗೊಂಡ ನಂತರ ವಿವಿಧ ಸುದ್ದಿ ವಾಹಿನಿಗಳು ಮತ್ತು ಏಜೆನ್ಸಿಗಳು ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿವೆ. ಸಮೀಕ್ಷೆಗಳ ಪ್ರಕಾರ, ಈ ಬಾರಿ ಆರ್‌ಜೆಡಿ ಮತ್ತು ನಿತೀಶ್ ಕುಮಾರ್ ನಡುವೆ ತೀರ್ವ ಪೈಪೋಟಿ ಏರ್ಪಡಲಿದೆ ಎಂದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು