ನವದೆಹಲಿ: ಇಲ್ಲಿನ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶ್ವಾಸನಾಳದ ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಮುಂದುವರಿಸಲಾಗಿದೆ ಎಂದು ಪಕ್ಷದ ಮೂಲಗಳು ಶುಕ್ರವಾರ ಹೇಳಿವೆ.

‘ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದ ಸೋನಿಯಾ ಗಾಂಧಿ ಅವರಿಗೆ ಇತ್ತೀಚೆಗೆ ಮೂಗಿನಲ್ಲಿ ರಕ್ತಸ್ರಾವ ಕಾಣಿಸಿಕೊಂಡಿತು. ಹೀಗಾಗಿ ಜೂನ್ 12ರಂದು ಅವರನ್ನು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಕಾಂಗ್ರೆಸ್ ಪಕ್ಷದ ಮುಖ್ಯ ವಕ್ತಾರ ಜೈರಾಂ ರಮೇಶ್ ತಿಳಿಸಿದ್ದಾರೆ.

‘ಶ್ವಾಸನಾಳದ ಕೆಳಭಾಗಕ್ಕೆ ಸೋಂಕು ತಗುಲಿದ್ದು, ಕೋವಿಡ್ ನಂತರದ ತೊಂದರೆಗಳ ಜೊತೆಗೆ ಈ ಸೋಂಕಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದೆ’ ಎಂದೂ ಹೇಳಿದ್ದಾರೆ.

ಸಮನ್ಸ್: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿಗೊಳಿಸಿದೆ.

ರಾಹುಲ್ ಭೇಟಿ:ರಾಹುಲ್ ಗಾಂಧಿ ಅವರು ಗುರುವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ತಾಯಿಯ ಆರೋಗ್ಯ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.