ಸೋಮವಾರ, ಆಗಸ್ಟ್ 8, 2022
24 °C

ಆಸ್ಪತ್ರೆಯಿಂದ ಸೋನಿಯಾ ಮನೆಗೆ: 23ಕ್ಕೆ ಹಾಜರಾಗಲು ಇ.ಡಿ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ(ಪಿಟಿಐ): ಕೋವಿಡ್ ಸೋಂಕಿನ ಕಾರಣಕ್ಕೆ ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಸಂಜೆ ಬಿಡುಗಡೆಯಾಗಿದ್ದಾರೆ. ಅಲ್ಲದೆ, ಅವರು ಮನೆಯಲ್ಲೇ ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ತಿಳಿಸಿದ್ದಾರೆ.  

ಜೂನ್ 2ರಂದು ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಜೂನ್ 12ರಂದು ಆಸ್ಪತ್ರೆಗೆ ದಾಖಲಾಗಿದ್ದರು. 

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಜೂನ್ 8ರಂದು ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇ.ಡಿ) ನೋಟಿಸ್ ನೀಡಿತ್ತು. ಆದರೆ, ಕೋವಿಡ್ ಕಾರಣಕ್ಕೆ ಮತ್ತಷ್ಟು ಕಾಲಾವಕಾಶ ನೀಡುವಂತೆ ಸೋನಿಯಾ ಅವರು ಇ.ಡಿಗೆ ಕೋರಿದ್ದರು. ಅಲ್ಲದೆ, ಇದೀಗ ಮತ್ತೆ ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಹೊಸದಾಗಿ ಸಮನ್ಸ್ ನೀಡಿದೆ.

ಇದನ್ನೂ ಓದಿ–

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು