ಸೋಮವಾರ, ಡಿಸೆಂಬರ್ 5, 2022
24 °C

ನಾವು ಚಂಡಮಾರುತಗಳನ್ನು ಎದುರಿಸಿದ್ದೇವೆ: ತಾಯಿ ಜೊತೆಗಿನ ಫೋಟೊ ಹಂಚಿಕೊಂಡ ರಾಹುಲ್‌

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ಯಾತ್ರೆಗೆ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ಉತ್ತಮ ಜನಸ್ಪಂದನೆ ವ್ಯಕ್ತವಾಗಿದೆ.

ಯಾತ್ರೆಯನ್ನು ಮುನ್ನಡೆಸುತ್ತಿರುವ ರಾಹುಲ್‌ ಗಾಂಧಿ ಜೊತೆ ಅವರ ತಾಯಿ ಸೋನಿಯಾ ಗಾಂಧಿ ಸಹ ಇಂದು ಹೆಜ್ಜೆ ಹಾಕಿದ್ದಾರೆ. 

ತಾಯಿ ಜೊತೆಗಿನ ಫೋಟೊವನ್ನು ಟ್ವೀಟ್‌ ಮಾಡಿರುವ ರಾಹುಲ್‌, ‘ನಾವು ಹಿಂದೆಯೂ ಚಂಡಮಾರುತಗಳನ್ನು ಎದುರಿಸಿದ್ದೇವೆ. ಇಂದಿನ ಪ್ರತಿ ಸವಾಲನ್ನೂ ಮೆಟ್ಟಿ ನಿಲ್ಲುತ್ತೇವೆ. ನಾವೆಲ್ಲರೂ ಒಂದಾಗಿ ಭಾರತವನ್ನು ಒಗ್ಗೂಡಿಸುತ್ತೇವೆ’ ಎಂದು ತಿಳಿಸಿದ್ದಾರೆ. 

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕು ಬೆಳ್ಳಾಳೆಯಿಂದ ಇಂದು ಆರಂಭಗೊಂಡ ಭಾರತ್ ಜೋಡೊ ಪಾದಯಾತ್ರೆ ಜಕ್ಕನಹಳ್ಳಿ ಕ್ರಾಸ್ ತಲುಪಿದೆ. ಇಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪಾಲ್ಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು