ಬುಧವಾರ, ಜೂನ್ 23, 2021
30 °C
ಚುನಾವಣೆಗಳ ಸೋಲಿನ ಪರಾಮರ್ಶೆಗೆ ಶೀಘ್ರ ಸಿಡಬ್ಲ್ಯುಸಿ ಸಭೆ

ಪಂಚರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್‌ ಸಾಧನೆ ನಿರಾಶಾದಾಯಕ: ಸೋನಿಯಾ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಸಾಧನೆ ಬಹಳ ನಿರಾಶಾದಾಯಕವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಭಿಪ್ರಾಯಪಟ್ಟರು.

ಪ‍ಕ್ಷದ ಎಲ್ಲ ಸಂಸದರೊಂದಿಗೆ ಶುಕ್ರವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣೆಯಲ್ಲಿನ ಹಿನ್ನಡೆಯಿಂದ ಪಕ್ಷದ ಸದಸ್ಯರು ನಮ್ರತೆ ಮತ್ತು ಪ್ರಾಮಾಣಿಕ ಮನೋಭಾವದಿಂದ ಪಾಠ ಕಲಿಯಬೇಕು‘ ಎಂದು ಅವರು ಹೇಳಿದ್ದಾರೆ.

‘ವಿಧಾನಸಭಾ ಚುನಾವಣಾ ಫಲಿತಾಂಶಗಳ ಪರಾಮರ್ಶೆಗೆ ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಸೇರಲಿದೆ‘ ಎಂದು ಅವರು ತಿಳಿಸಿದರು.

ಇದೇ ವೇಳೆ ಸಭೆಯಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಚುನಾವಣೆಯಲ್ಲಿ ಜಯಗಳಿಸಿದ ಮಮತಾ ಬ್ಯಾನರ್ಜಿ, ಎಂ. ಕೆ.ಸ್ಟಾಲಿನ್ ಮತ್ತು ಎಡಪಕ್ಷಗಳನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.

ಇದನ್ನೂ ಓದಿ... ರಾಜ್ಯಕ್ಕೆ 1,200 ಟನ್ ಆಮ್ಲಜನಕ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು