ನವದೆಹಲಿ: ‘ಗಾಂಧಿ' ಕುಟುಂಬದವರು ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಬಿಜೆಪಿಯವರಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಪಕ್ಷ, ‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದಿದ್ದಾರೆ. ಲಸಿಕೆ ವಿಚಾರದಲ್ಲಿ ‘ಕೆಲಸಕ್ಕೆ ಬಾರದ' ವಿಚಾರಗಳ ಬಗ್ಗೆ ಮಾತನಾಡುವ ಬದಲು, ದೇಶದಲ್ಲಿರುವ ಎಲ್ಲರಿಗೂ ಲಸಿಕೆ ನೀಡುವ ವಿಷಯದಲ್ಲಿ ‘ರಾಜಧರ್ಮ' ಪಾಲಿಸುವಂತೆ ಒತ್ತಾಯಿಸಿದೆ.

ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲಸಿಕೆಯ ಮೊದಲ ಡೋಸ್ ತೆಗೆದುಕೊಂಡಿದ್ದಾರೆ. ಪುತ್ರ ರಾಹುಲ್ ಗಾಂಧಿ, ವೈದ್ಯರ ಸಲಹೆಯಂತೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ ನಂತರ ಲಸಿಕೆಯನ್ನು ತೆಗೆದುಕೊಳ್ಳಲಿದ್ದಾರೆ ಎಂದು ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ ತಿಳಿಸಿದ್ದಾರೆ.

ಬಿಜೆಪಿಯ ಹಲವು ಮುಖಂಡರು ಗಾಂಧಿ ಕುಟುಂಬದವರು ಲಸಿಕೆ ತೆಗೆದುಕೊಂಡಿರುವ ಕುರಿತು ಶಂಕೆ ವ್ಯಕ್ತಪಡಿಸುವ ಜತೆಗೆ, ಕಾಂಗ್ರೆಸ್ ಪಕ್ಷ ಲಸಿಕೆ ಬಗ್ಗೆ ಜನರಲ್ಲಿ ವಿರೋಧ ವ್ಯಕ್ತವಾಗುವಂತೆ ಮಾಡುತ್ತಿದೆ ಎಂದು ಆರೋಪಿಸಿದ್ದರು.

ಈ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸುರ್ಜೇವಾಲ ಅವರು, ‘ಕೇಂದ್ರ ಸರ್ಕಾರ ಕೆಲಸಕ್ಕೆ ಬಾರದ ವಿಚಾರಗಳ ಬಗ್ಗೆ ಗಮನ ಹರಿಸುವ ಬದಲು, ಈಗಾಗಲೇ ತಾನೇ ನಿಗದಿಪಡಿಸಿರುವ ಗುರಿಯಂತೆ, ಡಿ.31ರೊಳಗೆ 100 ಕೋಟಿ ಭಾರತೀಯರಿಗೆ ಲಸಿಕೆ ನೀಡುವ ಗುರಿಯನ್ನು ತಲುಪಲು, ಪ್ರತಿ ದಿನ 80 ಲಕ್ಷದಿಂದ 1 ಕೋಟಿ ಜನರಿಗೆ ಲಸಿಕೆ ನೀಡುವತ್ತ ಗಮನ ಹರಿಸುವ ಮೂಲಕ ರಾಜಧರ್ಮವನ್ನು ಪಾಲಿಸಬೇಕು' ಎಂದು ಹೇಳಿದ್ದಾರೆ.

ಇದನ್ನೂ ಓದಿ– ಕೋಟ್ಯಂತರ ಡೋಸ್ಗಳಿಗೆ ಒತ್ತಡ, ಗುರಿತಪ್ಪಿದ ಕ್ಯೂರ್ವ್ಯಾಕ್ ಲಸಿಕೆ ಸಂಶೋಧನೆ!

‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಂಡಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಮೊದಲ ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ. ಈ ಕುರಿತುಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರಿಗೆ ತಿಳಿಸುತ್ತಿದ್ದೇವೆ‘ ಎಂದು ಸುರ್ಜೇವಾಲ ಹೇಳಿದ್ದಾರೆ.

‘ರಾಹುಲ್ ಗಾಂಧಿ ಅವರು ಕಳೆದ ಏಪ್ರಿಲ್ 16 ರಂದು ಲಸಿಕೆ ತೆಗೆದುಕೊಳ್ಳಲು ನಿರ್ಧಾರವಾಗಿತ್ತು. ಅವರಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ, ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಗಾದರು. ಏಪ್ರಿಲ್ 18 ರಂದು ಸೋಂಕು ದೃಢಪಟ್ಟಿತು. ಹಾಗಾಗಿ ವೈದ್ಯರ ಸಲಹೆಯಂತೆ ಕೋವಿಡ್‌ನಿಂದ ಚೇತರಿಸಿಕೊಂಡ ನಂತರ ಲಸಿಕೆ ತಗೆದುಕೊಳ್ಳುತ್ತಾರೆ‘ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.