ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ರಾಜ್ಯಗಳಲ್ಲಿ ಸೋಲು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ

Last Updated 13 ಮಾರ್ಚ್ 2022, 11:44 IST
ಅಕ್ಷರ ಗಾತ್ರ

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಕುರಿತು ಆತ್ಮಾವಲೋಕನ ನಡೆಸುವ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಇತರೆ ಪ್ರಮುಖ ನಾಯಕರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯು ಭಾನುವಾರ ಎಐಸಿಸಿ ಕಚೇರಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್‌ ಕೇವಲ ಎರಡು ಸ್ಥಾನಗಳಲ್ಲಷ್ಟೇ ಗೆಲುವು ಸಾಧಿಸಿದೆ.

ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಅಂಬಿಕಾ ಸೋನಿ, ಸಲ್ಮಾನ್‌ ಖುರ್ಷಿದ್‌, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.

'ರಾಹುಲ್‌ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಬೇಕು. ಗಾಂಧಿ ಕುಟುಂಬದಿಂದ ಕಳೆದ 30 ವರ್ಷಗಳಲ್ಲಿ ಯಾರೊಬ್ಬರೂ ಪ್ರಧಾನಿ ಅಥವಾ ಸಚಿವರಾಗಿಲ್ಲ. ಕಾಂಗ್ರೆಸ್‌ನ ಒಗ್ಗಟ್ಟಿಗೆ ಗಾಂಧಿ ಕುಟುಂಬದ ಅವಶ್ಯಕತೆ ಇರುವುದನ್ನು ತಿಳಿದುಕೊಳ್ಳಬೇಕಿದೆ' ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅಭಿಪ್ರಾಯ ಪಟ್ಟಿರುವುದಾಗಿ ವರದಿಯಾಗಿದೆ.

ಸೋಮವಾರದಿಂದ ಬಜೆಟ್‌ ಕುರಿತ ಅಧಿವೇಶನ ಪುನರಾರಂಭವಾಗಲಿದ್ದು, ಸಂಸತ್ತಿನಲ್ಲಿ ಚರ್ಚೆಗೆ ತರಬೇಕಿರುವ ವಿಚಾರಗಳ ಬಗ್ಗೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಉಕ್ರೇನ್‌ನಿಂದ ಹಿಂದಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಮುಂದಿನ ಭವಿಷ್ಯ, ಹಣದುಬ್ಬರ, ನಿರುದ್ಯೋಗ ಸೇರಿದಂತೆ ಹಲವು ವಿಚಾರಗಳನ್ನು ಕಾಂಗ್ರೆಸ್‌ ಪಕ್ಷವು ಅಧಿವೇಶನದಲ್ಲಿ ಪ್ರಸ್ತಾಪಿಸಲು ಸಜ್ಜಾಗಿದೆ.

ಗಾಂಧಿ ಕುಟುಂಬದವರು ಕಾಂಗ್ರೆಸ್‌ ತೊರೆಯಲಿದ್ದಾರೆ ಎಂಬ ವರದಿಗಳನ್ನು ಪಕ್ಷದ ವಕ್ತಾರ ರಣದೀಪ್‌ ಸುರ್ಜೇವಾಲಾ ಶನಿವಾರ ತಳ್ಳಿ ಹಾಕಿದ್ದರು.

ಪಕ್ಷವು ಪಂಜಾಬ್‌ನಲ್ಲಿ 117 ಸ್ಥಾನಗಳ ಪೈಕಿ 18 ಸ್ಥಾನಗಳಲ್ಲಿ ಮಾತ್ರ ಜಯಿಸುವ ಮೂಲಕ ಅಧಿಕಾರ ಕಳೆದುಕೊಂಡಿದ್ದು, ಉತ್ತರಪ್ರದೇಶದ 403ರಲ್ಲಿ ಕೇವಲ 2, ಉತ್ತರಾಖಂಡದ 70ರಲ್ಲಿ 18, ಗೋವಾದ 40ರಲ್ಲಿ 12 ಮತ್ತು ಮಣಿಪುರದಲ್ಲಿ 60 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮಾತ್ರ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT