ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಆಗಸ್ಟ್‌ 20ರ ಸೋನಿಯಾ ನೇತೃತ್ವದ ಸಭೆಯಲ್ಲಿ ಉದ್ಧವ್‌ ಠಾಕ್ರೆ ಭಾಗಿ: ಶಿವಸೇನಾ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಮುಂಬೈ: ಆಗಸ್ಟ್‌ 20ರಂದು ನಡೆಯಲಿರುವ ಸೋನಿಯಾ ಗಾಂಧಿ ನೇತೃತ್ವದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭಾಗಿಯಾಗಲಿದ್ದಾರೆ ಎಂದು ಶಿವಸೇನಾ ಮುಖಂಡ ಸಂಜಯ್‌ ರಾವುತ್‌ ತಿಳಿಸಿದ್ದಾರೆ.

ಬಿಜೆಪಿಯೇತರ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಪ್ರಮುಖ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಸೋನಿಯಾ ಕರೆದಿದ್ದಾರೆ.

ಈ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್‌ ಪಕ್ಷವು ಭಾಗಿಯಾಗುತ್ತಿರುವುದು ಇನ್ನೂ ದೃಢಪಟ್ಟಿಲ್ಲ.

'ಪ್ರತಿಪಕ್ಷಗಳು ಒಂದಾಗಿವೆ ಮತ್ತು ಒಗ್ಗಟ್ಟಿನ ಶಕ್ತಿಯನ್ನು ಪ್ರದರ್ಶಿಸಲಿವೆ' ಎಂದು ರಾವುತ್‌ ಅಭಿಪ್ರಾಯಪಟ್ಟಿದ್ದಾರೆ.

'ಕಪಿಲ್ ಸಿಬಲ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರು ಇತ್ತೀಚೆಗೆ ಸಭೆ ನಡೆಸಿದ್ದಾರೆ. ಸೋನಿಯಾ ಗಾಂಧಿ ಅವರು ಬಿಜೆಪಿಯೇತರ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಪ್ರಮುಖ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಕರೆದಿದ್ದಾರೆ' ಎಂದು ರಾವುತ್‌ ಹೇಳಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಬಿಜು ಜನತಾದಳದ ಪಿನಾಕಿ ಮಿಶ್ರಾ, ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್‌ ಒಬ್ರಿಯಾನ್‌, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಡ ಪಕ್ಷಗಳ ಮುಖಂಡರಾದ ಸೀತಾರಾಮ್ ಯೆಚೂರಿ ಮತ್ತು ಡಿ ರಾಜಾ, ಶಿರೋಮಣಿ ಅಕಾಲಿದಳದ ನರೇಶ್ ಗುಜ್ರಾಲ್, ಡಿಎಂಕೆಯ ತಿರುಚಿ ಶಿವ ಮತ್ತು ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್‌ ಸೇರಿದಂತೆ ಇನ್ನೂ ಹಲವು ನಾಯಕರು ಕಪಿಲ್‌ ಸಿಬಲ್‌ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು