ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಸೋನಿಯಾ ಗಾಂಧಿ

Last Updated 20 ಮೇ 2021, 11:16 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕೋವಿಡ್–19 ಪಿಡುಗಿನ ಸಂದರ್ಭದಲ್ಲಿ ತಂದೆ–ತಾಯಿ ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ದುರಂತದ ಸಂದರ್ಭದಲ್ಲಿ ದೇಶ ಈ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆ ನೀಡಬೇಕಾಗಿದೆ. ಇಂತಹ ಮಕ್ಕಳಿಗೆ ನವೋದಯ ವಿದ್ಯಾಲಯಗಳಲ್ಲಿ ಉಚಿತ ಶಿಕ್ಷಣ ಒದಗಿಸಲು ಒತ್ತು ನೀಡಬೇಕು ಎಂದೂ ಸಲಹೆ ಮಾಡಿದ್ದಾರೆ.

‘ತಂದೆ, ತಾಯಿ ಅಥವಾ ಇಬ್ಬರನ್ನೂ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ. ಈಗ ಅಂತಹ ಮಕ್ಕಳ ಜೊತೆಗೆ ದೇಶ ನಿಲ್ಲಬೇಕಾಗಿದೆ. ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ತಮ್ಮ ಪತಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಿದ್ದರು. ದೇಶದಾದ್ಯಂತ ಇಂಥ 661 ಶಾಲೆಗಳಿವೆ‘ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT